ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಟಾಸ್ಕ್‌ಪೋರ್ಸ್ ಸಮಿತಿ ಸಭೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ ಕುಲಕರ್ಣಿ ಅವರು ಕೋವಿಡ್-19 ಮಾರ್ಗಸೂಚಿ ಹಾಗೂ ಕರೋನಾ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಜ್ವರದಿಂದ ಬಳಲುತ್ತಿರುವವರನ್ನು ಕರೋನಾ ಟೆಸ್ಟ್‌ಗೆ ಒಳಪಡಿಸಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಬೇಕು. ಗಂಗೊಳ್ಳಿಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು. ಕರೋನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂಬಿತ್ಯಾದಿ ಆಗ್ರಹಗಳು ಸಭೆಯಲ್ಲಿ ವ್ಯಕ್ತವಾಯಿತು.
ಗ್ರಾಮ ಪಂಚಾಯತ್ ಪಿಡಿಒ ಉಮಾಶಂಕರ, ಟಾಸ್ಕ್‌ಪೋರ್ಸ್ ಸಮಿತಿ ಸದಸ್ಯರಾದ ಬಿ.ರಾಘವೇಂದ್ರ ಪೈ, ಫಿಲೋಮಿನಾ ಫೆರ್ನಾಂಡಿಸ್, ಕಿರಿಯ ಆರೋಗ್ಯ ಸಹಾಯಕಿ ಶ್ರೀದೇವಿ, ಆಶಾ ಕಾರ್ಯಕರ್ತೆ ಉಷಾ, ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್, ಚೈತ್ರಾ ಉಪಸ್ಥಿತರಿದ್ದರು.