ಗಂಗೊಳ್ಳಿ ಗ್ರಾಮ ಪಂಚಾಯತ್: ಟಾಸ್ಕ್‌ಪೋರ್ಸ್ ಸಮಿತಿ ಸಭೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕೋವಿಡ್ ನಿಯಂತ್ರಣಕ್ಕೆ 50 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳಿರುವ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶಗಳನ್ನು ಜಿಲ್ಲಾಧಿಕಾರಿಯವರ ಆದೇಶದಂತೆ ಜೂ.10ರಿಂದ ಜೂನ್ 14ರವರೆಗೆ ಸಂಪೂರ್ಣ ಲಾಕ್‌ಡೌನ್ ಮಾಡಲಾಗುತ್ತಿದೆ. ಜನರು ಲಾಕ್‌ಡೌನ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕರೊನಾ ನಿಯಂತ್ರಿಸಲು ಮತ್ತು ಗಂಗೊಳ್ಳಿಯನ್ನು ಕರೋನಾ ಮುಕ್ತ ಗ್ರಾಮವನ್ನಾಗಿ ಮಾಡಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದ್ದು, ಕರೋನಾ ಸೋಂಕು ನಿಯಂತ್ರಿಸಲು ಜನರು ಸಹಕಾರ ನೀಡಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಹೇಳಿದರು.

Call us

Click Here

Click here

Click Here

Call us

Visit Now

Click here

ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬುಧವಾರ ಜರಗಿದ ಟಾಸ್ಕ್‌ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂಜಾ ನಾಯ್ಕ್ ಮಾತನಾಡಿ, ಅಗತ್ಯ ತುರ್ತು ವೈದ್ಯಕೀಯ ಸೇವೆ ವಾಹನ ಹೊರತುಪಡಿಸಿ ಇನ್ಯಾವುದೇ ವಾಹನಗಳು ಸಂಚರಿಸುವಂತಿಲ್ಲ. ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ಸಂಚರಿಸುವ ವಾಹನಗಳನ್ನು ಮುಟ್ಟುಗೋಲು ಹಾಕಿ ಪ್ರಕರಣ ದಾಖಲಿಸಲಾಗುವುದು. ಗಂಗೊಳ್ಳಿಯಲ್ಲಿ ಪೊಲೀಸರು ನಿರಂತರ ಗಸ್ತು ತಿರುಗುತ್ತಿದ್ದು, ಲಾಕ್‌ಡೌನ್ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆ ಕರೋನಾ ನಿಯಂತ್ರಣಕ್ಕೆ ಎಲ್ಲಾ ರೀತಿಯ ನೆರವು ಸಹಕಾರ ನೀಡಲಿದೆ ಎಂದರು.

ವಂಡ್ಸೆ ಹೋಬಳಿ ಕಂದಾಯ ನಿರೀಕ್ಷಕ ರಾಘವೇಂದ್ರ ದೇವಾಡಿಗ ಮಾತನಾಡಿ, ಲಾಕ್ ಡೌನ್ ಸಮಯದಲ್ಲಿ ಬೆಳಿಗ್ಗೆ ೭ ಗಂಟೆಯೊಳಗೆ ಹಾಲು ವಿತರಕತು ಮನೆ ಮನೆಗೆ ಹಾಲು ವಿತರಿಸಲು ಅವಕಾಶ ನೀಡಲಾಗಿದೆ. ಹಾಲು ಉತ್ಪಾದಕರು ಸಹಕಾರಿ ಸಂಘಗಳಲ್ಲಿ ಬೆಳಿಗ್ಗೆ ಮತ್ತು ಸಂಜೆ ಸೀಮಿತ ಅವಧಿಗೆ ಹಾಲು ಸಂಗ್ರಹಕ್ಕೆ ಅವಕಾಶ ನೀಡಲಾಗಿದೆ. ಅಂಗಡಿಗಳಲ್ಲಿ ಹಾಲು ಮಾರಾಟ ಮಾಡುವುದು ನಿಷೇಧಿಸಲಾಗಿದೆ. ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಕಡ್ಡಾಯವಾಗಿ ಮುಚ್ಚಬೇಕು. ಮೀನುಗಾರಿಕಾ ಚಟುವಟಿಕೆಯನ್ನು ಕೂಡ ಜೂ.14ರವರೆಗೆ ನಿಷೇಧಿಸಲಾಗಿದೆ ಎಂದರು.

ಟಾಸ್ಕ್‌ಪೋಸ್ ಸಮಿತಿ ಸದಸ್ಯರಾದ ಬಿ.ರಾಘವೇಂದ್ರ ಪೈ, ನಾಗರಾಜ ಖಾರ್ವಿ ಗುಡ್ಡೆಕೇರಿ, ಮಂತಿ ಶ್ರೀನಿವಾಸ ಖಾರ್ವಿ, ಕಿರಿಯ ಆರೋಗ್ಯ ಸಹಾಯಕಿ ಪ್ರಜ್ವಲಾ, ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್, ಆಶಾ ಕಾರ್ಯಕರ್ತೆ ಕಲ್ಪನಾ ಶೇರುಗಾರ್, ರೇಣುಕಾ ಮೊದಲಾದವರು ಸಲಹೆ ಸೂಚನೆ ನೀಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ಪೊಲೀಸ್ ಠಾಣೆಯ ಎಎಸ್ಸೈ ವೆಂಕಟೇಶ ಗೊಲ್ಲ, ಟಾಸ್ಕ್‌ಪೋಸ್ ಸಮಿತಿ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿಗಳು, ಪೊಲೀಸ ಠಾಣೆಯ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು. ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ ವಂದಿಸಿದರು.

Call us

Leave a Reply

Your email address will not be published. Required fields are marked *

18 + ten =