ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ: ಎಸ್.ಎಂ.ಎಸ್. ಬ್ಯಾಂಕಿಂಗ್ ಸೇವೆ’ಗೆ ಚಾಲನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗಂಗೊಳ್ಳಿ ಹಾಗೂ ಆಸುಪಾಸಿನ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಮೂಲಕ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿರುವ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯು ಸಹಕಾರಿಯ ಬೆಳವಣಿಗೆಯ ಜೊತೆಗೆ ಸಹಕಾರಿಯ ಸದಸ್ಯರ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಸದಸ್ಯರಿಗೆ ವಿನೂತನ ಸೌಲಭ್ಯ ಯೋಜನೆಗಳನ್ನು ನೀಡುವ ಸಹಕಾರಿಯ ಪ್ರಯತ್ನ ಶ್ಲಾಘನೀಯ ಎಂದು ಗಂಗೊಳ್ಳಿ ಶ್ರೀ ಅಂಬಿಕಾ ದೇವಸ್ಥಾನದ ಅರ್ಚಕ ವೇದಮೂರ್ತಿ ಜಿ.ವಸಂತ ಭಟ್ ಹೇಳಿದರು.

Call us

Call us

Call us

ಅವರು ಗಂಗೊಳ್ಳಿಯ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಕಛೇರಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಸಹಕಾರಿಯ ವಿನೂತನ ‘ಎಸ್.ಎಂ.ಎಸ್. ಬ್ಯಾಂಕಿಂಗ್ ಸೇವೆ’ಗೆ ಚಾಲನೆ ನೀಡಿ ಆಶೀರ್ವಚನ ನೀಡಿ ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಮಾತನಾಡಿ, ಶತಮಾನದ ಹೊಸ್ತಿಲಲ್ಲಿ ಇರುವ ಸಹಕಾರಿಯು ಸೇವೆಗೆ ಪ್ರಸಿದ್ಧಿಗೊಂಡಿದೆ. ತನ್ನ ಸೇವೆಗಳ ಮೂಲಕ ಜನಮನ ಗೆದ್ದಿರುವ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯು ತನ್ನ ಸದಸ್ಯರಿಗೆ ಇನ್ನಷ್ಟು ಸೌಲಭ್ಯ ಸೇವೆಗಳನ್ನು ನೀಡುವಲ್ಲಿ ಮುಂದಾಗಬೇಕು. ಶತಮಾನೋತ್ಸವ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸುವಂತಾಗಲಿ ಎಂದು ಶುಭ ಹಾರೈಸಿದರು.

ಸಹಕಾರಿಯ ಅಧ್ಯಕ್ಷ ಎಚ್.ಗಣೇಶ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ, ನಿರ್ದೇಶಕರಾದ ಜಿ.ವೆಂಕಟೇಶ ನಾಯಕ್, ಜಿ.ವೆಂಕಟೇಶ ಶೆಣೈ, ಬಿ.ರಾಘವೇಂದ್ರ ಪೈ, ಜಿ.ಉದಯಶಂಕರ ರಾವ್, ವತ್ಸಲಾ ಎಸ್.ಕಾಮತ್, ನಾರಾಯಣ ಪೂಜಾರಿ, ಮಹಾಬಲ ಪೂಜಾರಿ, ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕ ಗಣೇಶ ನಾಯಕ್, ಶಾಖೆಯ ಸಲಹೆಗಾರ ಪುಂಡಲೀಕ ನಾಯಕ್ ಹಾಗೂ ಸಹಕಾರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

four × 1 =