ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಲ, ಅಮೃತಾ ಯುವತಿ ಮಂಡಲ, ಅರ್ಚನಾ ಮಹಿಳಾ ಮಂಡಲ ಮೇಲ್ಗಂಗೊಳ್ಳಿ ಮತ್ತು ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 6ನೇ ವರ್ಷದ ‘ಮುದ್ದು ಕೃಷ್ಣ’ ವೇಷ ಸ್ಪರ್ಧೆಯು ಮೇಲ್ಗಂಗೊಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರಗಿತು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಚೆಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಮಾಜಿ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಶುಭಾಶಂಸನೆಗೈದರು. ಸವಿತಾ ಸಮಾಜದ ಉಡುಪಿ ಜಿಲ್ಲಾ ಸಂಘಟಕ ಮಂಜುನಾಥ ಸಾಲಿಯಾನ್ ಮಕ್ಕಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಮಹಿಳಾ ಮಂಡಲದ ಅಧ್ಯಕ್ಷೆ ವಿನೋದಾ ಕೆ., ತೀರ್ಪುಗಾರರಾದ ಆಶಾ, ಜ್ಯೋತಿ ಉಪಸ್ಥಿತರಿದ್ದರು.
ಯುವತಿ ಮಂಡಲದ ಸದಸ್ಯೆ ನಯನಾ ಸ್ವಾಗತಿಸಿದರು. ಯುವತಿ ಮಂಡಲದ ಕಾರ್ಯದರ್ಶಿ ಸಹನಾ ಕೆ. ಕಾರ್ಯಕ್ರಮ ನಿರೂಪಿಸಿದರು. ಯುವಕ ಮಂಡಲದ ಸ್ಥಾಪಕ ಅಧ್ಯಕ್ಷ ಭಾಸ್ಕರ ಎಚ್.ಜಿ. ವಂದಿಸಿದರು. ಸ್ಪರ್ಧೆಯಲ್ಲಿ ಸುಮಾರು 25 ಮಕ್ಕಳು ಭಾಗವಹಿಸಿದ್ದರು.