ಗಂಗೊಳ್ಳಿ: ನಿವೃತ್ತ ಅಧ್ಯಾಪಕ ಕೋಟ ರಾಮದಾಸ ಭಟ್ ನಿಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ನಿವೃತ್ತ ಅಧ್ಯಾಪಕ, ಹಿರಿಯ ಪುರೋಹಿತ ಗಂಗೊಳ್ಳಿ ನಿವಾಸಿ ಕೋಟ ರಾಮದಾಸ ಭಟ್ (99) ಗುರುವಾರ ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.

Click Here

Call us

Call us

ಗಂಗೊಳ್ಳಿ ಪರಿಸರದಲ್ಲಿ ‘ಮಾಸ್ಟ್ರ ಮಾಮ್’ ಎಂದೇ ಪರಿಚಿರಾಗಿದ್ದ ಇವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳಲ್ಲಿ ಸುಮಾರು 26 ವರ್ಷಗಳ ಕಾಲ ಸಂಸ್ಕೃತ ಮತ್ತು ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ತಾಂತ್ರಿಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಇವರು, ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಮತ್ತು ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರ ಪ್ರೀತಿಗೆ ಪಾತ್ರರಾಗಿ ಅವರ ಅಚ್ಚುಮೆಚ್ಚಿನ ಶಿಷ್ಯರಾಗಿ ಗುರುತಿಸಿಕೊಂಡಿದ್ದರು.

Click here

Click Here

Call us

Visit Now

ಕಾರ್ಕಳದಲ್ಲಿ ವಾಸ್ತವ್ಯವಿದ್ದ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಸಹಪಾಠಿಯಾಗಿ ಉಪನಿಷತ್ ಮತ್ತು ವೇದಾಂತಕ್ಕೆ ಸಂಬಂಧಪಟ್ಟ ವಿಷಯಗಳನ್ನು ಅಭ್ಯಸಿಸಿದಲ್ಲದೆ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರಿಗೆ ಕನ್ನಡವನ್ನು ಕಲಿಸಿಕೊಟ್ಟಿದ್ದರು. ಒಂದೆರೆಡು ವರ್ಷಗಳ ಕಾಲ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರಿಗೆ ಪೂರ್ವಾಶ್ರಮದಲ್ಲಿ ಕನ್ನಡವನ್ನು ಬೋಧಿಸಿದ್ದರು. ಇವರು ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿ ’ಸರಸ್ವತಿ ಪುರಸ್ಕಾರ’ ಮತ್ತು ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರು ’ವೈದಿಕ ಕುಲಭೂಷಣ’ ಬಿರುದನ್ನು ನೀಡಿ ಗೌರವಿಸಿದ್ದರು.

ವೈದಿಕ ಆಚರಣೆಗಳಲ್ಲಿ ತಮ್ಮನ್ನು ಪೂರ್ಣವಾಗಿ ತೊಡಗಿಸಿಕೊಂಡಿದ್ದ ಇವರು ವೇದ, ಜ್ಯೋತಿಷ, ಕರ್ಮಾಂಗಗಳಲ್ಲಿ ಅಪಾರ ಪಾಂಡಿತ್ಯ ಪಡೆದು ದಕ್ಷಿಣೋತ್ತರ ಜಿಲ್ಲೆಗಳಲ್ಲಿ ವೈದಿಕ ಜ್ಯೋತಿಷ ಶಿರೋಮಣಿಗಳೆನಿಸಿಕೊಂಡಿದ್ದರು. ಅನೇಕ ದೇವಾಲಯಗಳಲ್ಲಿನ ಧಾರ್ಮಿಕ ಕಾರ್ಯಗಳಲ್ಲಿ ಸೇವೆ ಸಲ್ಲಿಸಿ ವೈದಿಕ ವೃಂದಕ್ಕೆ ಮಾರ್ಗದರ್ಶನ ನೀಡುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆಗಳನ್ನು ನೀಡಿ ಜನಾನುರಾಗಿದ್ದರು. ತಮ್ಮ ಇಳಿ ವಯಸ್ಸಿನಲ್ಲೂ ಕಳೆದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಹುಮ್ಮಸ್ಸಿನಿಂದ ಮತ ಚಲಾಯಿಸಿ ಎಲ್ಲರ ಗಮನ ಸೆಳೆದಿದ್ದರು. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

three × 1 =