ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿ ಹರೀಶ ಆರ್. ಸೋಮವಾರ ಅಧಿಕಾರ ಸ್ವೀಕರಿಸಿದರು.
ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿದ್ದ ವಿನಯ್ ಕೊರ್ಲಹಳ್ಳಿ ಅವರು ಹರೀಶ್ ಆರ್. ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು. ವಿನಯ್ ಕೊರ್ಲಹಳ್ಳಿ ಕುಂದಾಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಕಡೂರು ಸಂಚಾರ ಠಾಣೆಯ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಹರೀಶ್ ಆರ್. ಅವರನ್ನು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು.