ಕುದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮುಖ್ಯರಸ್ತೆಯ ಮಹಿಳಾ ಕೋ-ಆಪರೇಟಿವ್ ಸೊಸೈಟಿ ಕಟ್ಟಡ ಉನ್ನತಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರದ ಉದ್ಘಾಟನೆ ನಡೆಯಿತು.
ಉದ್ಘಾಟಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಮನುಷ್ಯನಿಗೆ ಆರೋಗ್ಯ ಮುಖ್ಯ. ಮನುಷ್ಯ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕಾಗಿದ್ದು, ಆರೋಗ್ಯ ಕ್ಷೇತ್ರಕ್ಕೆ ಸರಕಾರ ಹೆಚ್ಚಿನ ಒತ್ತನ್ನು ನೀಡುತ್ತಿದೆ. ಜನರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಔಷಧಿಗಳು ದೊರೆಯುವಂತಾಗಬೇಕು ಎಂಬ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಿದ್ದು ಪ್ರತಿಯೊಂದು ಗ್ರಾಮೀಣ ಪ್ರದೇಶಗಳಲ್ಲಿ ಜನೌಷಧಿ ಕೇಂದ್ರಗಳನ್ನು ಆರಂಭಿಸಲು ಸರಕಾರ ಅನುಮತಿ ನೀಡುತ್ತಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ ಕುಲಕರ್ಣಿ, ಗಂಗೊಳ್ಳಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಶಾರದಾ ರಾಮಕೃಷ್ಣ ಶೇರುಗಾರ್, ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ಬಿ.ರಾಘವೇಂದ್ರ ಪೈ, ಶಾಂತಿ ಖಾರ್ವಿ, ಜನೌಷಧಿ ಕೇಂದ್ರದ ಮಾಲಕಿ ಶರಾವತಿ ಆರ್.ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.ರಾಜೇಶ ಹೆಗ್ಡೆ ಸ್ವಾಗತಿಸಿ ವಂದಿಸಿದರು.