ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ: ಯಶಪಾಲ್ ಸುವರ್ಣ ಭೇಟಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಅವರು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಗಂಗೊಳ್ಳಿಯ ಪ್ರಧಾನ ಕಛೇರಿಗೆ ಮಂಗಳವಾರ ಭೇಟಿ ನೀಡಿದರು.

Call us

Call us

Visit Now

ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಅವರು ಯಶಪಾಲ ಸುವರ್ಣ ಅವರನ್ನು ಸ್ವಾಗತಿಸಿ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಕಾರ್ಯಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು. ಸಂಘದ ಆಡಳಿತ ಮಂಡಳಿಯ ನೂತನ ನಿರ್ದೇಶಕರೊಂದಿಗೆ ಸಂಸ್ಥೆಯ ಕಾರ್ಯಯೋಜನೆ ಬಗ್ಗೆ ಚರ್ಚೆ ನಡೆಸಿದ ಯಶಪಾಲ ಸುವರ್ಣ ಅವರು ಸಂಸ್ಥೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸದಾಶಿವ ಖಾರ್ವಿ ಅವರನ್ನು ಸನ್ಮಾನಿಸಿ ಗೌರವಿಸಿದರು.

Click here

Call us

Call us

ಸಂಘದ ನಿರ್ದೇಶಕರಾದ ಹರೀಶ ಖಾರ್ವಿ, ಚಂದ್ರ ಖಾರ್ವಿ, ಮೋಹನ ಖಾರ್ವಿ, ಗುರುರಾಜ್ ಖಾರ್ವಿ, ರಾಜೇಶ ಸಾರಂಗ್, ಜ್ಯೋತಿ ಆರ್. ಹಾಗೂ ಸಂಘದ ವ್ಯವಸ್ಥಾಪಕ ಮೋಹನ ಖಾರ್ವಿ ಉಪಸ್ಥಿತರಿದ್ದರು.

ಇದನ್ನು ಓದಿ
► ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ: ಅಧ್ಯಕ್ಷರಾಗಿ ಸದಾಶಿವ ಖಾರ್ವಿ ಆಯ್ಕೆ – https://kundapraa.com/?p=36299 .

Leave a Reply

Your email address will not be published. Required fields are marked *

three + 17 =