ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಒಂದು ವ? ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳ ನೆನಪಿಗಾಗಿ ಹಾಗೂ ಪರಿಸರ ಜಾಗೃತಿಗಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಗೊಳ್ಳಿ ಬಿಜೆಪಿ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಸಸಿ ನೆಡುವ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಪಕ್ಷದ ಪ್ರಮುಖರಾದ ಬಿ. ಸದಾನಂದ ಶೆಣೈ, ಉಮಾನಾಥ ದೇವಾಡಿಗ, ರಾಮಪ್ಪ ಖಾರ್ವಿ, ಹರೀಶ್ ಮೇಸ್ತ, ವಾಸುದೇವ ದೇವಾಡಿಗ, ಚಂದ್ರ ಖಾರ್ವಿ, ಅಶೋಕ ಪೂಜಾರಿ, ಸತೀಶ ಖಾರ್ವಿ, ಬೈಂದೂರು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಂತಿ ಅಶೋಕ್, ಜ್ಯೋತಿ ಆರ್., ಗ್ರಾಪಂ ಸದಸ್ಯರಾದ ಬಿ.ರಾಘವೇಂದ್ರ ಪೈ, ಬಿ.ಲಕ್ಷ್ಮೀಕಾಂತ ಮಡಿವಾಳ, ಬಿ.ಗಣೇಶ ಶೆಣೈ, ನಾಗರಾಜ ಖಾರ್ವಿ ಗುಡ್ಡೆಕೇರಿ, ಪ್ರಶಾಂತ ಖಾರ್ವಿ, ಮಂತಿ ಶ್ರೀನಿವಾಸ ಖಾರ್ವಿ, ರಾಜ್‌ಕಿರಣ್, ಗಂಗೊಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಪಕ್ಷದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.