ಗಂಗೊಳ್ಳಿ: ಭಗದ್ಗೀತೆ ಅಭಿಯಾನಕ್ಕೆ ಚಾಲನೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಶ್ರೀ ಕೃಷ್ಣ ಪರಮಾತ್ಮನು ಮನುಕುಲಕ್ಕಾಗಿ ನೀಡಿದ ಭಗವದ್ಗೀತೆಯನ್ನು ಪಠಿಸಿ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಮಾತ್ರ ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ ಮತ್ತು ಯಶಸ್ವಿ ಜೀವನವನ್ನು ನಡೆಸಲು ಸಾಧ್ಯ ಗಂಗೊಳ್ಳಿಯ ಉದ್ಯಮಿ ಜಿ.ವಿಠಲ ಭಾಸ್ಕರ ಶೆಣೈ ಹೇಳಿದರು.

Call us

Call us

ಗಂಗೊಳ್ಳಿಯ ಸಂಪಿಗೆ ಜಟ್ಟಿಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಭಗತ್ ಸಿಂಗ್ ಅಭಿಮಾನಿ ಬಳಗ ಮತ್ತು ಸಂಪಿಗೆ ಜಟ್ಟಿಗೇಶ್ವರ ದೇವಸ್ಥಾನದ ಸಮಿತಿಯ ಜಂಟಿ ಆಶ್ರಯದಲ್ಲಿ ಜರಗಿದ ಭಗವದ್ಗೀತೆ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಧಾರ್ಮಿಕ ಚಿಂತಕ ಮಂಗೇಶ ಶೆಣೈ ಅವರು ಭಗವದ್ಗೀತೆಯ ಮಹಿಮೆ ಮತ್ತು ಅದನ್ನು ಪಠಿಸುವ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಸಂಪಿಗೆ ಜಟ್ಟಿಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಮತ್ತು ಭಗತ್ ಸಿಂಗ್ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.ಸಂಪಿಗೆ ಜಟ್ಟಿಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರ ಕುಷ್ಟ ದೇವಾಡಿಗ ಸ್ವಾಗತಿಸಿದರು. ಉಮಾನಾಥ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಸವಿತಾ ಯು.ದೇವಾಡಿಗ ವಂದಿಸಿದರು.

Call us

Call us

Leave a Reply

Your email address will not be published. Required fields are marked *

nine − 7 =