ಗಂಗೊಳ್ಳಿ ಮಲ್ಯರಮಠ: ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರಿಗೆ ಗೌರವ ನಮನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಶ್ರೀಹರಿಪಾದ ಸೇರಿದ ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರು ತಮ್ಮ ಜೀವನದಲ್ಲಿ ಶಿಸ್ತು, ಸಮಯಪಾಲನೆ ಹಾಗೂ ಧಾರ್ಮಿಕತೆಗೆ ಹೆಚ್ಚಿನ ಒತ್ತು ನೀಡಿದ್ದರು. ಚಿಕ್ಕ ವಯಸ್ಸಿನಲ್ಲೇ ಸನ್ಯಾಸ ದೀಕ್ಷೆ ಸ್ವೀಕರಿಸಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಮಠದ ಜವಾಬ್ದಾರಿಹೊತ್ತು ಅದನ್ನು ಯಶಸ್ವಿಯಾಗಿ ನಿರ್ವಹಿಸಿದರು. ಸಮಾಜಕ್ಕೆ ಹಾಗೂ ಮಠಗಳಿಗೆ ಅಗತ್ಯ ಮಾರ್ಗದರ್ಶನ ನೀಡಿ ಸನ್ಮಾರ್ಗದಲ್ಲಿ ಮುನ್ನಡೆಯುವಂತೆ ಮಾಡಿ, ಮಠದ ಪರಂಪರೆಯನ್ನು ಉಳಿಸಿ ಬೆಳೆಸಿದರು. ಶ್ರೀಗಳು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆದು, ಅವರ ಜೀವನದ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಎಲ್ಲರೂ ಸಾತ್ವಿಕ ಜೀವನ ನಡೆಸುವಂತಾಗಬೇಕು ಎಂದು ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಹೇಳಿದರು.

ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗಿದ ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರಿಗೆ ಗೌರವ ನಮನ ಸಲ್ಲಿಸುವ ಕಾರ್ಯಕ್ರಮದಲ್ಲಿ ಗುರು ಗುಣಗಾನ ಮಾಡಿ ಮಾತನಾಡಿದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್ ಗುರು ಗುಣಗಾನ ಮಾಡಿದರು. ಗುರು ನಮನ ಕಾರ್ಯಕ್ರಮದ ಅಂಗವಾಗಿ ಸಂಜೆ ಭಜನೆ, ರಾತ್ರಿ ಶ್ರೀದೇವರಿಗೆ ಪ್ರಸನ್ನಪೂಜೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಜರಗಿತು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಜಿ. ವೆಂಕಟೇಶ ನಾಯಕ್, ಕೆ. ಗೋಪಾಲಕೃಷ್ಣ ನಾಯಕ್, ಆಡಳಿತ ಮಂಡಳಿ ಸದಸ್ಯರು, ಸಮಾಜ ಬಾಂಧವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

three × one =