ಗಂಗೊಳ್ಳಿ: ಮಾತೃಶ್ರೀ ರತ್ನಮ್ಮ ಹೆಗ್ಗಡೆಯವರ ಪುಣ್ಯಸ್ಮೃತಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಚೇತನಾಶಕ್ತಿಯಾಗಿದ್ದ ಮಾತೃಶ್ರೀ ರತ್ನಮ್ಮ ಹೆಗ್ಗಡೆಯವರು ಆತಿಥ್ಯವೇ ಪರಮಧರ್ಮವೆಂದು ನಂಬಿದವರು. ಅವರ ದೂರದರ್ಶಿತ್ವದ ಫಲವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಬಹಳಷ್ಟು ಅಭಿವೃದ್ಧಿಗೊಂಡು ವಿಶ್ವದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಮಕ್ಕಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ರತ್ನಮ್ಮ ಹೆಗ್ಗಡೆಯವರು ಶ್ರೀ ಕ್ಷೇತ್ರದ ಮೂಲಕ ಮಕ್ಕಳ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿದ್ದರು. ಅವರು ಮಾಡಿದ ದಾನ, ಧರ್ಮ ಹಾಗೂ ಆತಿಥ್ಯವೇ ಅವರನ್ನು ಇಂದು ಅಜರಾಮರನ್ನಾಗಿಸಿದೆ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು.

Call us

Call us

Call us

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಟಿ.ವಿಮಲಾ ವಿ.ಪೈ ಸಭಾಂಗಣದಲ್ಲಿ ಮೇಲ್‌ಗಂಗೊಳ್ಳಿ ಬಾವಿಕಟ್ಟೆಯ ಓಂ ಶ್ರೀ ಮಾತೃ ಮಂಡಳಿ ಆಶ್ರಯದಲ್ಲಿ ಡಾ.ಕಲಾಶ್ರೀ ಪ್ರಾಯೋಜಕತ್ವದಲ್ಲಿ ಜರಗಿದ ಮಾತೃಶ್ರೀ ರತ್ನಮ್ಮ ಹೆಗ್ಗಡೆಯವರ ಪುಣ್ಯಸ್ಮೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Call us

Call us

ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಎನ್.ಸುಭಾಶ್ಚಂದ್ರ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಅವರು ಪ್ರತಿಭಾನ್ವಿತ ಯುವ ಪ್ರತಿಭೆಗಳಿಗೆ ಮಾತೃಶ್ರೀ-೨೦೧೭ ಪ್ರಶಸ್ತಿ ಪ್ರದಾನ ಮಾಡಿದರು. ಕುಂದಾಪುರ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್, ರೇಣುಕಾ ವಾಸುದೇವ ಶೇರುಗಾರ್, ವೈಭವಿ ವಿ.ಶೆಣೈ, ರೇಖಾ ಕೃಷ್ಣ ಖಾರ್ವಿ, ಸಂಘದ ಅಧ್ಯಕ್ಷೆ ಸುಶೀಲಾ, ಉಪಾಧ್ಯಕ್ಷೆ ಪ್ರೇಮಾ, ಶ್ರೀ ಬಸವೇಶ್ವರ ದೇವಸ್ಥಾನದ ಮಾಜಿ ಅಧ್ಯಕ್ಷ ಮಣಿಕಂಠ ದಾಸ, ಈಶ್ವರ ಜಿ. ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

14 + eighteen =