ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧೀನದಲ್ಲಿದ್ದ ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶದಲ್ಲಿರುವ ಮಂಜುಗಡ್ಡೆ ಸ್ಥಾವರವನ್ನು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘಕ್ಕೆ ಐದು ವರ್ಷದ ಅವಧಿಗೆ ಗುತ್ತಿಗೆಗೆ ನೀಡಲಾಗಿದೆ.
ಮಂಗಳವಾರ ಮಂಗಳೂರಿನಲ್ಲಿರುವ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಪ್ರಧಾನ ಕಛೇರಿಯಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಮನಿ ಅವರು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಅವರಿಗೆ ಗಂಗೊಳ್ಳಿಯಲ್ಲಿರುವ ಮಂಜುಗಡ್ಡೆ ಸ್ಥಾವರವನ್ನು ಅಧಿಕೃತವಾಗಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ಮುದ್ದಣ್ಣ, ಮಾರ್ಕೇಟಿಂಗ್ ಮ್ಯಾನೇಜರ್ ಶಿವಪ್ಪ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಉಪಾಧ್ಯಕ್ಷ ಸೂರಜ್ ಖಾರ್ವಿ, ನಿರ್ದೇಶಕ ಚಂದ್ರ ಖಾರ್ವಿ ಉಪಸ್ಥಿತರಿದ್ದರು.