ಗಂಗೊಳ್ಳಿ ರೋಟರಿ ಕ್ಲಬ್‌ನಿಂದ ಮರವಂತೆ ಆರೋಗ್ಯ ಕೇಂದ್ರಕ್ಕೆ ಮಾರ್ಗಸೂಚಿ ನಾಮಫಲಕ ಕೊಡುಗೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಮಾರ್ಗಸೂಚಿ ನಾಮಫಲಕವನ್ನು ಕೊಡುಗೆಯಾಗಿ ನೀಡಲಾಯಿತು.

Call us

Call us

Call us

ನಾಮಫಲಕವನ್ನು ಅನಾವರಣಗೊಳಿಸಿ ಮಾತನಾಡಿದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ., ರಾಷ್ಟೀಯ ಹೆದ್ದಾರಿಯ ಬದಿಯಲ್ಲೇ ಆಸ್ಪತ್ರೆ ಇದ್ದು ವೇಗದಲ್ಲಿ ವಾಹನಗಳು ಸಂಚರಿಸುತ್ತಿರುವುದರಿಂದ ಪಕ್ಕನೆ ಆಸ್ಪತ್ರೆಯ ಇರುವಿಕೆ ಗೋಚರಿಸುವುದಿಲ್ಲ. ಹೊಸಬರಿಗೆ, ಇಲಾಖಾ ಅಧಿಕಾರಿಗಳಿಗೆ, ಸಾರ್ವಜನಿಕರಿಗೆ ಉಪಯುಕ್ತವಾಗಲಿ ಎನ್ನುವ ಉದ್ದೇಶದಿಂದ ಈ ಕೊಡುಗೆಯನ್ನು ರೋಟರಿ ಸಂಸ್ಥೆ ವತಿಯಿಂದ ನೀಡುತ್ತಿರುವುದಾಗಿ ಅವರು ಹೇಳಿದರು.

Call us

Call us

ನಾಮಫಲಕವನ್ನು ಕೊಡುಗೆಯಾಗಿ ನೀಡಿದ ಗಂಗೊಳ್ಳಿ ರೋಟರಿ ಸದಸ್ಯ ಬೋರ್ಡಿನ ಲಿಫ್ಟನ್ ಒಲಿವೇರಾ ಅವರನ್ನು ಗೌರವಿಸಲಾಯಿತು. ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಲಯ ಸೇನಾನಿ ಕೆ.ರಾಮನಾಥ್ಧ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Leave a Reply

Your email address will not be published. Required fields are marked *

three + six =