ಗಂಗೊಳ್ಳಿ ರೋಟರಿ ಕ್ಲಬ್‌ನಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್‌ಗಳನ್ನು ವಿತರಿಸಲಾಯಿತು.

ವಲಯ 1ರ ಅಸಿಸ್ಟೆಂಟ್ ಗವರ್ನರ್ ಜಯಪ್ರಕಾಶ ಶೆಟ್ಟಿ ಅವರು ಗಂಗೊಳ್ಳಿ ರೋಟರಿ ವತಿಯಿಂದ ಕೊಡ ಮಾಡಿದ ಮಾಸ್ಕ್‌ಗಳನ್ನು ಎಸ್.ವಿ.ಶಾಲೆಗಳ ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಎಚ್. ಗಣೇಶ ಕಾಮತ್ ಅವರಿಗೆ ಹಸ್ತಾಂತರಿಸಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ನಾರಾಯಣ ಇ. ನಾಯ್ಕ, ವಲಯ ಸೇನಾನಿ ಕೆ. ರಾಮನಾಥ ನಾಯಕ ಹಾಗೂ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

thirteen + eight =