ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವಿಶ್ವ ಇಂಜಿನಿಯರ್ ದಿನಾಚರಣೆ ಪ್ರಯುಕ್ತ ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಅಧ್ಯಕ್ಷ, ಇಂಜಿನಿಯರ್ ಎಚ್.ಗಣೇಶ ಕಾಮತ್ ಅವರನ್ನು ಬುಧವಾರ ಗಂಗೊಳ್ಳಿಯಲ್ಲಿನ ಅವರ ಕಛೇರಿಯಲ್ಲಿ ಗೌರವಿಸಿ ಅಭಿನಂದಿಸಲಾಯಿತು.
ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ, ಕಾರ್ಯದರ್ಶಿ ಎಂ.ನಾಗೇಂದ್ರ ಪೈ, ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರಾದ ಜನಾರ್ದನ ಪೂಜಾರಿ ಪೆರಾಜೆ, ಕೆ.ರಾಮನಾಥ ನಾಯಕ್, ಉಪನ್ಯಾಸಕ ನಾರಾಯಣ ಇ. ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.