ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಶಾಲೆಯ ಮಕ್ಕಳಿಗೆ ಬ್ಯಾಗ್ ವಿತರಣೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಗಂಗೊಳ್ಳಿ ರೋಟರಿ ಕ್ಲಬ್ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮ ಜರುಗಿತು.

Call us

Call us

Click Here

Visit Now

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ದುರ್ಗರಾಜ್ ಪೂಜಾರಿಯವರು ಖಾಸಗಿ ಅನುದಾನಿತ ಶಾಲೆಗಳು ಸರಕಾರದ ವಿವಿಧ ಸೌಲಭ್ಯಗಳನ್ನು ಉತ್ತಮವಾಗಿ ಬಳಸಿಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಆದರೂ ಅನುದಾನಿತ ಶಾಲೆಗಳಲ್ಲಿ ಕೆಲವೊಂದು ಮೂಲಭೂತ ಸೌಲಭ್ಯದ ಕೊರತೆ ಇದ್ದರೂ ವಿದ್ಯಾರ್ಥಿಗಳ ಮೇಲೆ ಇದರ ಪರಿಣಾಮ ಬೀರದಂತೆ ಸಂಘ ಸಂಸ್ಥೆಗಳು ಹಾಗೂ ದಾನಿಗಳ ನೆರವಿನಿಂದ ತಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

Click here

Click Here

Call us

Call us

ಶಾಲೆಯ ಮುಖ್ಯಶಿಕ್ಷಕಿ ಸುಮನಾ ಪಡಿಯಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್‌ನ ಚುನಾಯಿತ ಅಧ್ಯಕ್ಷ ಕೆ.ರಾಮನಾಥ ನಾಯಕ್, ಬಿ.ಲಕ್ಷ್ಮೀಕಾಂತ ಮಡಿವಾಳ ಶುಭ ಹಾರೈಸಿದರು. ಶಾಲೆಯ ಸಹಶಿಕ್ಷಕರಾದ ಜಿ.ವಿಶ್ವನಾಥ ಭಟ್, ನಾರಾಯಣ ಉಪಾಧ್ಯಾಯ, ಲಕ್ಷ್ಮೀ, ಮಾಲಾಶ್ರೀ, ರೇಖಾ ಮತ್ತಿತರರು ಉಪಸ್ಥಿತರಿದ್ದರು.

ಸಹಶಿಕ್ಷಕ ಎನ್.ಸುಭಾಶ್ಚಂದ್ರ ನಾಯಕ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ ವಂದಿಸಿದರು.

 

Leave a Reply

Your email address will not be published. Required fields are marked *

five × 5 =