ಗಂಗೊಳ್ಳಿ: ಶ್ರೀಮದ್ ಭಗವದ್ಗೀತಾ ಬೋಧನೆ ಕಾರ್ಯಕ್ರಮ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗಂಗೊಳ್ಳಿಯ ನಿನಾದ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಜ್ಞಾನಗಂಗಾ ಕಾರ್ಯಕ್ರಮದ ಅಂಗವಾಗಿ ಶ್ರೀಮದ್ ಭಗವದ್ಗೀತಾ ಬೋಧನೆ ಕಾರ್ಯಕ್ರಮ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಖುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿದ ಧಾರ್ಮಿಕ ಮುಖಂಡ ಮಂಗೇಶ ಶೆಣೈ ಅವರು ಭಗವದ್ಗೀತೆಯ ಪರಿಚಯ, ಶ್ಲೋಕಗಳ ಉಚ್ಛಾರ, ವ್ಯಾಕರಣ, ಪದಗಳ ಅರ್ಥ, ಭಾವಾರ್ಥ ಮುಂತಾದವುಗಳನ್ನು ತಿಳಿಸಿದರು. ಭಗವದ್ಗೀತೆಯ ಪ್ರಥಮ ಎರಡು ಅಧ್ಯಾಯಗಳನ್ನು ತಮ್ಮದೇ ವಿಶಿಷ್ಟ ಶೈಲಿಯಲ್ಲಿ ವಿವರಿಸಿದರು.

Call us

ಪ್ರಾಸ್ತಾವಿಕವಾಗಿ ಮಾತನಾಡಿದ ನಿನಾದ ಸಂಸ್ಥೆಯ ಅಧ್ಯಕ್ಷ ಎಂ.ಮುಕುಂದ ಪೈ ಅವರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಸಂಸ್ಮರಣೆ ಹಾಗೂ ಗುರುವಂದನ ಕಾರ್ಯಕ್ರಮದ ಭಾಗವಾಗಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮುಂದಿನ ಒಂದು ವರ್ಷ ಪರ್ಯಂತ ಭಗವದ್ಗೀತೆಯ ಬೋಧನೆ ಹಾಗೂ ಮಕ್ಕಳಿಗೆ ಧಾರ್ಮಿಕ, ಬೌದ್ಧಿಕ ವ್ಯಕ್ತಿತ್ವ ವಿಕಸನದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಜಿ.ಸುದರ್ಶನ ಆಚಾರ್ಯ, ಬಿ.ಪ್ರಕಾಶ ಪಡಿಯಾರ್, ನಿನಾದ ಸಂಸ್ಥೆಯ ಪದಾಧಿಕಾರಿಗಳು, ಸಮಾಜಬಾಂಧವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

eleven + 19 =