ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್ ಲೈಟ್ ಹೌಸ್ ಗಂಗೊಳ್ಳಿ ಇದರ ೨೯ನೇ ವಾರ್ಷಿಕೋತ್ಸವದ ಪ್ರಯುಕ್ತ ಬಡವರಿಗೆ ಉಚಿತ ಆಹಾರ ಸಾಮಾಗ್ರಿ ಕಿಟ್ ವಿತರಣಾ ಕಾರ್ಯಕ್ರಮ ಲೈಟ್ ಹೌಸ್ ಬಳಿಯ ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಬುಧವಾರ ಜರಗಿತು.
ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಬಡವರಿಗೆ ಉಚಿತ ಆಹಾರದ ಕಿಟ್ ವಿತರಿಸಿದರು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಉಪಾಧ್ಯಕ್ಷ ಸೂರಜ್ ಖಾರ್ವಿ, ನಿರ್ದೇಶಕ ಚಂದ್ರ ಖಾರ್ವಿ, ಗಂಗೊಳ್ಳಿ ಗ್ರಾಪಂ ಸದಸ್ಯೆ ಶಾಂತಿ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ನಾಗರಾಜ ಖಾರ್ವಿ ಆರ್.ಎನ್. ಸ್ವಾಗತಿಸಿದರು. ವಿಶ್ವನಾಥ ಎಂ.ಆರ್. ಕಾರ್ಯಕ್ರಮ ನಿರ್ವಹಿಸಿದರು. ಮಡಿ ವಿಶ್ವನಾಥ ಖಾರ್ವಿ ವಂದಿಸಿದರು.