ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಗ್ರಾಮ ಪಂಚಾಯತ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಗಂಗೊಳ್ಳಿಯಲ್ಲಿ ಶನಿವಾರ ಜರಗಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಪರಿಸರದಲ್ಲಿ ಸ್ವಚ್ಛತೆ ಕಾಪಾಡುವುದು ಎಲ್ಲರ ಜವಾಬ್ದಾರಿ. ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುವುದು, ಸಿಕ್ಕ ಸಿಕ್ಕಲ್ಲಿ ವಿಲೇವಾಡಿ ಮಾಡುವುದು ಕಾನೂನುಬಾಹಿರವಾಗಿದ್ದು ಇಂತಹ ಕೃತ್ಯ ನಡೆಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು. ತ್ಯಾಜ್ಯ ನಿರ್ವಹಣೆಗೆ ಗ್ರಾಮದಲ್ಲಿ ಎಸ್‌ಎಲ್‌ಆರ್‌ಎಂ ಘಟಕ ಕಾರ್ಯನಿರ್ವಹಿಸುತ್ತಿದ್ದು, ಜನರು ಸಹಕಾರ ನೀಡಬೇಕು ಎಂದು ಹೇಳಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ, ಕಾರ್ಯದರ್ಶಿ ದಿನೇಶ ಶೇರುಗಾರ್, ಗ್ರಾಪಂ ಸದಸ್ಯರು, ಸಿಬ್ಬಂದಿಗಳು, ಎಸ್‌ಎಲ್‌ಆರ್‌ಎಂ ಘಟಕದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.