ಗಂಗೊಳ್ಳಿ ಹಿಂದು ಜಾಗರಣ ವೇದಿಕೆಯಿಂದ ಸಚಿವರಿಗೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಹಿಂದು ಜಾಗರಣ ವೇದಿಕೆಯ ಆಹ್ವಾನದ ಮೇರೆಗೆ ಉಪ್ಪಿನಕುದ್ರು ರಾಮ ಭಜನಾ ಮಂದಿರದಲ್ಲಿ ಹಿಂದು ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಸಭೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪಾಲ್ಗೊಂಡರು.

ಸಚಿವರನ್ನು ಗೌರವಿಸಿದ ಗಂಗೊಳ್ಳಿಯ ಜಾಗರಣ ವೇದಿಕೆಯ ಮುಖಂಡರು ಗಂಗೊಳ್ಳಿಯ ಹಲವು ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆದರು. ಸಮಸ್ಯೆಯನ್ನು ಆಲಿಸಿ ಮನವಿಯನ್ನು ಸ್ವೀಕರಿಸಿದ ಸಚಿವರು ಪ್ರತಿ ಹಂತದಲ್ಲೂ ಹಿಂದು ಜಾಗರಣ ವೇದಿಕೆ ಸದಸ್ಯರ ಜೊತೆ ಇರುವುದಾಗಿ ಭರವಸೆ ನೀಡಿದರು.

ಸದಾನಂದ ಉಪ್ಪಿನಕುದ್ರು, ಗಂಗೊಳ್ಳಿ ಹಿಂಜಾವೇ ಅಧ್ಯಕ್ಷ ಗೋವಿಂದ್ರಾಯ ಶೇರುಗಾರ್, ರಾಮಪ್ಪ ಖಾರ್ವಿ, ಗಣೇಶ ಶೆಣೈ, ಮೋಹನ್ ಖಾರ್ವಿ, ರಾಘವೇಂದ್ರ ಗಾಣಿಗ, ನವೀನ್ ಗಂಗೊಳ್ಳಿ, ಯಶವಂತ್ ಗಂಗೊಳ್ಳಿ ಮತ್ತಿತರರು ಉಪಸ್ಥಿತರಿದ್ದರು. ಗಂಗೊಳ್ಳಿಯ ಸಂಘ ಪರಿವಾರದ ಪ್ರಮುಖರು, ಹಿರಿಯರು, ಬೈಂದೂರು ಹಿಂದು ಜಾಗರಣ ವೇದಿಕೆ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

3 × one =