ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿಯನ್ನು ಸಿಗರೇಟಿನಿಂದ ಸುಟ್ಟು ಕಿರುಕುಳ ನೀಡುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬೀಜಾಡಿ ನಿವಾಸಿ ಪ್ರಿಯಾಂಕ (21) ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈಕೆಯ ಪತಿ ಕುಂದಾಪುರದ ಬರೆಕಟ್ಟು ನಿವಾಸಿ ಪ್ರದೀಪ್ ತಲೆಮರೆಸಿಕೊಂಡಿದ್ದಾನೆ.
ಕುಂದಾಪುರ ಠಾಣೆಯಲ್ಲಿ ದೂರು ನೀಡಿರುವ ಪತ್ನಿ ಪ್ರಿಯಾಂಕ, ಸಿಗರೇಟಿನಿಂದ ಸುಟ್ಟು ಗಾಯ ಮಾಡಿದ ಬಳಿಕ ಮಗುವನ್ನು ಕೊಲ್ಲುವುದಾಗಿ ಹೇಳಿ ಹೊಟ್ಟೆಗೆ ತುಳಿದಿದ್ದಾನೆ. ಈ ವೇಳೆಯಲ್ಲಿ ತಪ್ಪಿಸಿಕೊಂಡ ಪರಿಣಾಮ ಸೊಂಟಕ್ಕೆ ಪೆಟ್ಟು ತಗುಲಿದೆ. ಪ್ರದೀಪನೇ ತಾನು ಮಾಡಿದ ಕೃತ್ಯವನ್ನು ತನ್ನ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಿಸಿ ನನ್ನ ಪೋಷಕರಿಗೆ ಕಳುಹಿಸಿ 2 ಲಕ್ಷ ರೂ. ಹಣ ಹಾಗೂ 4 ಪವನ್ ಚಿನ್ನವನ್ನು ವರದಕ್ಷಿಣೆ ರೂಪದಲ್ಲಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಒಂದು ವೇಳೆ ಹಣ ಮತ್ತು ಚಿನ್ನ ನೀಡದೇ ಇದ್ದಲ್ಲಿ ಕೊಂದುಬಿಡುವುದಾಗಿ ಹೇಳಿ ಕೊಲೆ ಬೆದರಿಕೆಯೊಡ್ಡಿದ್ದಾನೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.
ಪ್ರದೀಪ್ ಹಾಗೂ ಪ್ರಿಯಾಂಕ ಪರಸ್ಪರ ಪ್ರೀತಿಸಿ 2021ರ ಅಕ್ಟೋಬರ್ ತಿಂಗಳಿನಲ್ಲಿ ವಿವಾಹವಾಗಿದ್ದರು. ಮದುವೆಯಾಗಿ ಸ್ವಲ್ಪ ಸಮಯದ ಬಳಿಕ ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದು, ತವರು ಮನೆಯಿಂದ ಚಿನ್ನ ಹಾಗೂ ಹಣವನ್ನು ತರುವಂತೆ ಹಿಂಸೆ ನೀಡಲು ಆರಂಭಿಸಿದ್ದ.
► ಕುಂದಾಪುರ: ಗರ್ಭಿಣಿ ಪತ್ನಿಗೆ ಸಿಗರೇಟಿನಿಂದ ಸುಟ್ಟು ಕಿರುಕುಳ ನೀಡಿದ್ದ ಪತಿ ಸೆರೆ – https://kundapraa.com/?p=57695 .