ಗಿಡ ನೆಡುವುದಷ್ಟೇ ಅಲ್ಲ. ಪೋಷಣೆಯೂ ಮುಖ್ಯ: ಬನ್ನಾಡಿ ಸೋಮನಾಥ ಹೆಗ್ಡೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೇವಲ ಗಿಡಗಳನ್ನು ನೆಡುವುದು ಮಾತ್ರ ಮುಖ್ಯವಲ್ಲ. ನೆಟ್ಟ ಗಿಡಗಳನ್ನು ಫೋಷಿಸಬೇಕಾದುದು ಕೂಡಾ ಮುಖ್ಯ. ಎಲ್ಲಾ ವಿದ್ಯಾರ್ಥಿಗಳು ಒಂದೊಂದು ಗಿಡ ನೆಟ್ಟು, ನಂತರ ಪ್ರತೀ ದಿನವೂ ಅವುಗಳನ್ನು ಪೋಷಿಸಿ ಬೆಳೆಸಿ ಗಿಡಗಳ ಹುಟ್ಟು ಹಬ್ಬಗಳನ್ನ ಆಚರಿಸಿ ಎಂದು ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಹೇಳಿದರು.

Call us

Call us

ತಾಲೂಕು ಕಾನೂನು ಸೇವಾ ಸಮಿತಿ, ಕುಂದಾಪುರ ವಕೀಲರ ಸಂಘ (ರಿ), ಅಭಿಯೋಗ ಇಲಾಖೆ, ಅರಣ್ಯ ಇಲಾಖೆ, ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಮತ್ತು ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಜರುಗಿದ ವನಮಹೋತ್ಸವ ಸಪ್ತಾಹ ಕಾರ್ಯಕ್ರಮ ಕುಂದಾಪುರದ ಶ್ರೀ ವೆಂಕರಮಣ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಸಪ್ತಾಹದ ಸಮಾರೋಪದಲ್ಲಿ ಅವರು ಮತನಾಡಿದರು.

ಸಹಾಯಕ ಸರಕಾರಿ ಅಭಿಯೋಜಕರಾದ ಸಂದೇಶ ಭಂಡಾರಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್. ರವೀಶ್ಚಂದ್ರ ಶೆಟ್ಟಿ, ಉಪ ಅರಣ್ಯಾಧಿಕಾರಿಯವರಾದ ದಿಲೀಪ್, ಶ್ರೀ ವೆಂಕಟರಮಣ ಇಂಗ್ಲೀಷ್ ಮೀಡಿಯಂ ಪ್ರೈಮರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಶೀಲ ಮುಖ್ಯ ಅತಿಥಿಗಳಾಗಿದ್ದರು.

Call us

Call us

ಶ್ರೀ ವೆಂಕಟರಮಣ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ಪ್ರಾಂಶುಪಾಲೆ ರೂಪಾ ಶೆಣೈ ಪ್ರಾಸ್ತವಿಕವಾಗಿ ಮಾತನಾಡಿದರು. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗೇಶ್ ಶ್ಯಾನುಭಾಗ್ ಸ್ವಾಗತಿಸಿದರು. ಶ್ರೀ ವೆಂಕಟರಮಣ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ಪ್ರಾಧ್ಯಾಪಕ ಸುರೇಶ್ ತಿಂಗಳಾಯ ಕಾರ್ಯಕ್ರಮ ನಿರೂಪಿಸಿದರು. ಶಿವರಾಜ್ ವಂದಿಸಿದರು.

Leave a Reply

Your email address will not be published. Required fields are marked *

13 + 17 =