ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರೋಡ್ ಶೋ ಮೂಲಕ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಆಗಮಿಸಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಗುಜ್ಜಾಡಿ ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು.
ತೆರೆದ ವಾಹನದಲ್ಲಿ ಗುಜ್ಜಾಡಿಯ ವಿವಿಧೆಡೆ ರೋಡ್ ಶೋ ನಡೆಸಿದ ಶಾಸಕ ಗುರುರಾಜ್ ಗಂಟಿಹೊಳೆ, ಚುನಾವಣೆಯಲ್ಲಿ ಗೆಲುವಿಗೆ ಸಹಕರಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯಕರ್ತರ ಶಾಸಕನಾಗಿ ಕಾರ್ಯ ನಿರ್ವಹಿಸಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.
ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ತಾಪಂ ಮಾಜಿ ಸದಸ್ಯ ಕರಣ್ ಪೂಜಾರಿ, ಬಿಜೆಪಿ ಮುಖಂಡ ಉಮೇಶ ಮೇಸ್ತ, ಗಂಗೊಳ್ಳಿ ಮತ್ತು ಗುಜ್ಜಾಡಿ ಗ್ರಾಪಂ ಸದಸ್ಯರು, ವಿವಿಧ ಶಕ್ತಿ ಕೇಂದ್ರಗಳ ಅಧ್ಯಕ್ಷರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.