ಗುಡ್ಡಮ್ಮಾಡಿ: ಆಯಾ ತಪ್ಪಿ ಬಾವಿಗೆ ಬಿದ್ದ ವ್ಯಕ್ತಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಸೇನಾಪುರ ಗ್ರಾಮದ ಗುಡ್ಡಮ್ಮಾಡಿಯಲ್ಲಿ ಆಯಾತಪ್ಪಿ ಬಾವಿಗೆ ಬಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ರಕ್ಷಿಸಲು ಬಾವಿಗೆ ಇಳಿದ ಸಹೋದರನ ಸ್ಥಿತಿಯೂ ಚಿಂತಾಜನಕವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಲ್ಟರ್ ಡಿ’ಆಲ್ಮೇಡಾ(52) ಮೃತ ದುರ್ದೈವಿ.

20 ಅಡಿ ಆಳದ 5 ಅಡಿ ಅಗಲವಿರುವ ಬಾವಿಯ ಆಮ್ಲಜನಕದ ಕೊರತೆ ಇತ್ತು. ವಾಲ್ಟರ್ ಎಂಬುವವರು ಬಾವಿಗೆ ಬಿದ್ದ ತಕ್ಷಣ ಅವರ ರಕ್ಷಣೆಗೆ ಬಾವಿಗೆ ಇಳಿದ ಸಹೋದರ ಅಲ್ಭನ್ ಉಸಿರಾಟದ ಸಮಸ್ಯೆಯಿಂದ ಒದ್ದಾಡಿದ್ದಾರೆ. ಕೂಡಲೇ ಸ್ಥಳೀಯರು ಅಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಅವರು ಈರ್ವರನ್ನೂ ಮೇಲೆತ್ತಿದ್ದಾರೆ. ಅಷ್ಟರಲ್ಲಿಯೇ ವಾಲ್ಟರ್ ಮೃತಪಟ್ಟಿದ್ದು, ಅಲ್ಭನ್ ಸ್ಥೀತಿ ಗಂಭೀವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಮೃತರಿಗೆ ಪತ್ನಿ, ಹಾಗೂ ಮಗು ಇದೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು.

Leave a Reply

Your email address will not be published. Required fields are marked *

20 − nine =