ಗುರುಕುಲದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇಲ್ಲಿನ ಗುರುಕುಲ ಪಬ್ಲಿಕ್ ಶಾಲೆ ವಕ್ವಾಡಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಅರವಿಂದ ಮರಳಿಯವರು ಮಾತನಾಡಿ ಯೋಗವು ಕೇವಲ ದೈಹಿಕ ಬೆಳವಣಿಗೆ ಮಾತ್ರವಲ್ಲದೇ ಮಾನಸಿಕ ಬೆಳವಣಿಗೆಗೂ ಸಹಕಾರಿಯಾಗಿದೆ. ಕ್ರಮಬದ್ಧವಾಗಿ ಯೋಗಾಭ್ಯಾಸವನ್ನು ಮಾಡುವುದರಿಂದ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಸಾಧ್ಯ ಎಂದರು.

ಶಾಲೆಯ ವಿದ್ಯಾರ್ಥಿಗಳು ಮತ್ತು NCC ಕೆಡೆಟ್‌ಗಳು ಭಾಗವಹಿಸಿದ್ದರು. ಶ್ಲೋಕದೊಂದಿಗೆ ಆರಂಭವಾದ ಈ ಕಾರ್ಯಕ್ರಮವು ಯೋಗಾಸನ, ಕಪಾಲಭಾತಿ, ಪ್ರಾಣಯಾಮ, ಧ್ಯಾನದವರೆಗೆ ಮುಂದುವರೆದು ಎಲ್ಲರಲ್ಲೂ ಶಾಂತಿ ನೆಮ್ಮದಿ ಆರೋಗ್ಯ ನೆಲಸಲಿ ಎಂಬ ಸಂಕಲ್ಪವನ್ನು ಮಾಡಿ ಶಾಂತಿಪಾಠದೊಂದಿಗೆ ಕೊನೆಗೊಂಡಿತು.

 

Leave a Reply

Your email address will not be published. Required fields are marked *

one × four =