ಗುರುಕುಲ ಪಬ್ಲಿಕ್‌ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿದ್ಯಾರ್ಥಿಗಳು ನಿರಂತರವಾಗಿ ಕಲಿಕಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಉತ್ತಮ ಆರೋಗ್ಯ, ಮನಸ್ಸು, ಶಾಲಾ ವಾತಾವರಣ ಮತ್ತು ಕಲಿಕಾ ಸನ್ನಿವೇಶಗಳು ಪ್ರಧಾನಕಾರಕಗಳಾಗಿವೆ.ಅದರಲ್ಲಿಯೂ, ವಿದ್ಯಾರ್ಥಿಗಳು ವಿವಿಧ ಆಧುನಿಕ ಸೌಲಭ್ಯಗಳ ಪರಿಣಾಮವಾಗಿ ಕಲಿಕೆಯಲ್ಲಿ ಆಸಕ್ತಿಯನ್ನು ಕಳೆದುಕೊಳ್ಳುತ್ತಿರುವುದು ಶಿಕ್ಷಣ ಸಂಸ್ಥೆಗಳಿಗೆ ಮತ್ತು ಪಾಲಕರಿಗೆ ಪ್ರಮುಖ ಸಮಸ್ಯೆಯಾಗಿದೆ. ಮುಖ್ಯವಾಗಿ ,೬ ರಿಂದ ೧೦ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ಎದ್ದು ಕಾಣುವ ದೈಹಿಕ, ಮಾನಸಿಕ, ಬೌದ್ಧಿಕ ಮತ್ತು ಭಾವನಾತ್ಮಕ ಬದಲಾವಣೆಗಳು ಮತ್ತು ಅವುಗಳ ಸಮಸ್ಯೆಗಳ ಬಗ್ಗೆ ಸ್ವತ: ವಿದ್ಯಾರ್ಥಿಗಳಿಗೆ, ಪಾಲಕರಿಗೆ ಹಾಗೂ ಶಿಕ್ಷಕರುಗಳಿಗೆ ಅರಿವು ಇರುವುದು ಅನಿವಾರ್ಯವಾಗಿದೆ. ಇವೆಲ್ಲಾ ಉದ್ದೇಶಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿಷ್ಠಿತ ಗುರುಕುಲ ಪಬ್ಲಿಕ್ ಶಾಲೆ ವಕ್ವಾಡಿಯು ೬ನೇ ತರಗತಿಯಿಂದ ೧೦ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ತಾರುಣ್ಯವಸ್ಥೆಯ ಮಹತ್ವ ಮತ್ತು ಸಮಸ್ಯೆಗಳ ಬಗ್ಗೆ ಸಂವಹನ ರೂಪದ ಕಾರ್ಯಗಾರ ಜರುಗಿತು.

ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ಆಯುರ್ವೇದ ವೈದ್ಯೆ ಡಾ. ಅಪೇಕ್ಷಾ ರಾವ್ ರವರು ವಿದ್ಯಾರ್ಥಿಗಳಿಗೆ ಕ್ರೀಯಾತ್ಮಕ ಮತ್ತು ಧನಾತ್ಮಕ ಸಲಹೆಗಳನ್ನು ನೀಡಿದರಲ್ಲದೇ, ತಾರುಣ್ಯಾವಸ್ಥೆಯಲ್ಲಿ ವಿದ್ಯಾರ್ಥಿಗಳು ಕಲಿಕಾ ಚಟುವಟಿಕೆಗಳಲ್ಲಿ ಪರಿಪೂರ್ಣವಾಗಿ ಭಾಗವಹಿಸಲು ಧನಾತ್ಮಕವಾಗಿ ಯಾವ ರೀತಿಯಾಗಿ ಯೋಚನೆಮಾಡಬೇಕು ಎನ್ನುವುದನ್ನು ಕುರಿತು ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳಿಗೆ ಹಾಗೂ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಅತಿಥಿಗಳ ಪರಿಚಯ ಮತ್ತು ಪ್ರಾಸ್ತಾವಿಕ ನುಡಿಗಳನ್ನು ಶಾಲೆಯ ಕನ್ನಡ ಶಿಕ್ಷಕರಾದ, ರಾಘವೇಂದ್ರ ಅಂಬುಜೆ ನಡೆಸಿದರಲ್ಲದೇ, ವಿಜ್ಞಾನ ಶಿಕ್ಷಕಿ, ಅನುಪಮ ಶೆಟ್ಟಿ ಸರ್ವರನ್ನು ವಂದಿಸಿದರು.

Leave a Reply

Your email address will not be published. Required fields are marked *

sixteen + five =