ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ವನಮಹೋತ್ಸವ ಆಚರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಬಾಂಡ್ಯ ಎಜುಕೇಶನ್ ಟ್ರಸ್ಟ್‌ನ ಜಂಟಿ ಕಾರ್ಯನಿರ್ವಹಣಾಧಿಕಾರಿ ಅನುಪಮ ಎಸ್. ಶೆಟ್ಟಿ ಹಾಗೂ ಶಾಲೆಯ ಉಪ ಪ್ರಾಂಶುಪಾಲರಾದ ಸುನಂದಾ ಪಾಟೀಲ್ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳು ಪರಿಸರ ಕಾಳಜಿಯನ್ನು ಮೂಡಿಸಿಕೊಳ್ಳಬೇಕು, ಗಿಡಗಳನ್ನು ಬೆಳೆಸುವುದರ ಮೂಲಕ ಪರಿಸರದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು. ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಪರಿಸರದಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕೆಂದು ಕರೆ ನೀಡಿದರು. ವಿವಿಧ ಔಷಧೀಯ ಸಸ್ಯಗಳ ಮಹತ್ವವನ್ನು ತಿಳಿ ಹೇಳಿದರು. ಶಾಲಾ ವಿದ್ಯಾರ್ಥಿಗಳು ವಿವಿಧ ಔಷಧೀಯ ಗಿಡಗಳನ್ನು ನೆಡುವುದರ ಮೂಲಕ ಸಕ್ರಿಯವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

Call us

Call us

Call us

Leave a Reply

Your email address will not be published. Required fields are marked *

ten + 6 =