ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಗೊಂಬೆಯಾಟದ ಮಾಹಿತಿ ನೀಡುವಂತಹ ಫೋಟೋ ಗ್ಯಾಲರಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು ಇತ್ತೀಚೆಗೆ ಗೊಂಬೆ ಮನೆಯಲ್ಲಿ ಉದ್ಘಾಟಿಸಿದರು.
ಉದ್ಘಾಟಿಸಿ ಮಾತನಾಡಿದ ಹರಿಕೃಷ್ಣ ಪುನರೂರು, ಗೊಂಬೆಯಾಟ ಕಲೆಯನ್ನು ಎಲ್ಲರೂ ಸೇರಿ ಉಳಿಸಬೇಕು. ಮುಂದೆ ಈ ಸಂಸ್ಥೆ ಇನ್ನೂ ಹೆಚ್ಚಿನ ಯಶಸ್ಸನ್ನು ಕಾಣಲಿ ಎಂದು ಹೇಳಿದರು.
ಉಪ್ಪಿನಕುದ್ರು ಗೊಂಬೆಯಾಟ ಟ್ರಸ್ಟ್ ನ ನವೀಕೃತ ವೆಬ್ ಸೈಟ್ ನ್ನು ಕೆನರಾ ಬ್ಯಾಂಕಿನ ನಿವೃತ್ತ ಮೆನೇಜರ್ ಬಿ.ಆರ್. ನರಸಿಂಹ ರಾವ್, ಉಡುಪಿ ಇವರು ಉದ್ಘಾಟಿಸಿದರು. ಇವರನ್ನು ಗೊಂಬೆಯಾಟ ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು.
ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ಶೀರ್ಷಿಕೆಯಡಿಯಲ್ಲಿ 2019-20ನೇ ಸಾಲಿನ ಎಸ್. ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಉಪ್ಪಿನಕುದ್ರು ಸರಕಾರಿ ಪ್ರೌಢ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿ. ಕಾರ್ತಿಕ್ ಐತಾಳ್ (611/625) ಮತ್ತು 2019-20ನೇ ಸಾಲಿನ ಎಸ್. ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಹಾಗೂ ಉಪ್ಪಿನಕುದ್ರು ಗೊಂಬೆಯಾಟ ತಂಡದ ಚಂಡೆ ಕಲಾವಿದ ಬಿ. ಪನ್ನಗ ಮಯ್ಯ, ಕುಂದಾಪುರ(615/625) ಇವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಅಕಾಡೆಮಿಗೆ ಮೈಕ್ ಸೆಟ್ ಕೊಡುಗೆಯಾಗಿ ನೀಡಿದ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿವೃತ್ತ ಹಿರಿಯ ಶಾಖಾ ನಿರೀಕ್ಷಕ ವಿಶ್ವಂಭರ ಐತಾಳ್ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಬೈಂದೂರು ವಲಯದ ಕಾರ್ಯದರ್ಶಿಗಳಾದ ಡಾ. ಸುಬ್ರಹ್ಮಣ್ಯ ಭಟ್ ಭಾಗವಹಿಸಿದ್ದರು. ಅಕಾಡೆಮಿಯ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಸ್ವಾಗತಿಸಿದರು. ಶಿಕ್ಷಕ ನಾಗೇಶ್ ಶ್ಯಾನುಭಾಗ್ ರವರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಉದಯ ಭಂಡಾರ್‌ಕಾರ್ ಧನ್ಯವಾದ ಸಮರ್ಪಿಸಿದರು.