ಗ್ರಾಮ ಪಂಚಾಯತ್‌ಗಳಲ್ಲಿ ಕೋವಿಡ್ ಶೂನ್ಯಕ್ಕೆ ಇಳಿಸಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಕೋವಿಡ್ ಪ್ರಕರಣಗಳನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಗ್ರಾಮ ಪಂಚಾಯತ್ ಕಾರ್ಯಪಡೆಗಳು ಕಾರ್ಯೋನ್ಮುಖವಾಗುವಂತೆ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಕುಂದಾಪುರ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ಗಳೊಂದಿಗೆ ವೀಡಿಯೋ ಸಂವಾದದಲ್ಲಿ ಮಾತನಾಡಿದರು.

Call us

Click Here

Click here

Click Here

Call us

Visit Now

Click here

ಎಲ್ಲಾ ಗ್ರಾಮಗಳು 10 ದಿನದಲ್ಲಿ ತಮ್ಮ ವ್ಯಾಪ್ತಿಯಲ್ಲಿ ಪ್ರಸ್ತುತ ಕಂಡು ಬಂದಿರುವ ಕೋವಿಡ್ ಪ್ರಕರಣಗಳನ್ನು ಶೂನ್ಯಕ್ಕೆ ಇಳಿಸಿ, ಯಾವುದೇ ಹೊಸ ಪ್ರಕರಣಗಳು ಕಂಡುಬರದಂತೆ ಕಾರ್ಯನಿರ್ವಹಿಸಬೇಕು. ಇದಕ್ಕಾಗಿ ತಮ್ಮ ವ್ಯಾಪ್ತಿಯಲ್ಲಿ ಕಠಿಣ ನಿರ್ಭಂಧಗಳನ್ನು ವಿಧಿಸಿ, ಕೋವಿಡ್ ಹರಡುವುದನ್ನು ನಿಯಂತ್ರಿಸಿ, ಕೋವಿಡ್ ಮುಕ್ತ ಗ್ರಾಮಗಳನ್ನಾಗಿಸಬೇಕು ಎಂದರು.

ಗ್ರಾಮದಲ್ಲಿ ಕೋವಿಡ್ ಸೋಂಕಿತರ ಮನೆಗಳನ್ನು ಸೀಲ್ಡೌನ್ ಮಾಡಿದ ನಂತರ ಅವರ ಜೀವನ ನಿರ್ವಹಣೆಗೆ ಯಾವುದೇ ತೊಂದರೆಯಾಗದಂತೆ ಪಂಚಾಯತ್ ವತಿಯಿಂದ ಆಹಾರ್ ಕಿಟ್ಗಳನ್ನು ವಿತರಿಸಬೇಕು. ಪ್ರತಿದಿನ ಅವರ ಆಕ್ಸಿಜನ್ ಪ್ರಮಾಣವನ್ನು ಪಲ್ಸ್ ಆಕ್ಸಿಮೀಟರ್ ಮೂಲಕ ಪರೀಕ್ಷಿಸಬೇಕು. ಗ್ರಾಮ ಪಂಚಾಯತ್ ಸದಸ್ಯರು ಮತ್ತು ಅಧಿಕಾರಿಗಳು ಪ್ರತಿದಿನ ಅವರನ್ನು ಭೇಟಿ ಮಾಡಿ ಅವರಲ್ಲಿ ಒಂಟಿಯಲ್ಲ ಎಂಬ ಭಾವನೆ ಮೂಡಿಸಿ, ಧೈರ್ಯ ತುಂಬಬೇಕು ಎಂದರು.

ಗ್ರಾಮ ಪಂಚಾಯತ್ ವ್ಯಾಪಿಯಲ್ಲಿ 50 ಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬAದಲ್ಲಿ ಕಂಪ್ಲೀಟ್ ಲಾಕ್ಡೌನ್ ಮಾಡಲು ಈಗಾಗಲೇ ನಿರ್ಧರಿಸಿದ್ದು, ಗ್ರಾಮಗಳ ಗಡಿಯಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸುವ ಮೂಲಕ ಇತರೆ ಪಂಚಾಯತ್ಗಳ ಸಾರ್ವಜನಿಕರು ಗ್ರಾಮದೊಳಗೆ ಬರದಂತೆ ಮತ್ತು ಇಲ್ಲಿನ ಗ್ರಾಮಸ್ಥರು ಹೊರ ಹೋಗದಂತೆ ಕಾರ್ಯಪಡೆಯ ಸದಸ್ಯರು ಎಚ್ಚರವಹಿಸಬೇಕು. ಕೋವಿಡ್ ಹರಡುವುದನ್ನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಗ್ರಾಮಗಳ ಲಾಕ್ಡೌನ್ ಮಾಡುತ್ತಿದ್ದು, ಸಾರ್ವಜನಿಕರೂ ಅಗತ್ಯ ಸಹಕಾರ ನೀಡಬೇಕು ಎಂದು ಸಚಿವ ಕೋಟ ಹೇಳಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಿ, ಪಾಸಿಟಿವ್ ಬಂದು ಅದರ ಮಾಹಿತಿಯನ್ನು ಗ್ರಾಮ ಪಂಚಾಯತ್ಗಳಿಗೆ ನೀಡದ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದ ಸಚಿವ ಕೋಟ, ಹೋಂ ಐಸೋಲೇಶನ್ನಲ್ಲಿದ್ದು ಸಾರ್ವಜನಿಕವಾಗಿ ಒಡಾಡುವವರ ವಿರುದ್ಧ ಸಹ ಪ್ರಕರಣ ದಾಖಲಿಸಿ ಹಾಗೂ ಅಂತಹವರ ಕೈಗಳಿಗೆ ಸೀಲ್ ಹಾಕುವಂತೆ ಸೂಚನೆ ನೀಡಿದರು.

Call us

ಎಲ್ಲಾ ಗ್ರಾಮ ಪಂಚಾಯತ್ ಕಾರ್ಯಪಡೆಗಳು ವಾರದಲ್ಲಿ 2 ಬಾರಿ ಸಭೆ ಸೇರಿ ತಾವು ಕೈಗೊಳ್ಳಬೆಕಾದ ಕಾರ್ಯಗಳ ಕುರಿತು ಯೋಜನೆ ಹಾಕಿಕೊಂಡು ಅದರಂತೆ ಕಾರ್ಯನಿರ್ವಹಿಸಬೇಕು. ಆಶಾ ಹಾಗೂ ಆರೋಗ್ಯ ಕಾರ್ಯಕರ್ತೆಯರು ನಿಯಮಿತವಾಗಿ ಸೋಂಕಿತರ ಮನೆ ಭೇಟಿ ನೀಡಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದರು.

Leave a Reply

Your email address will not be published. Required fields are marked *

five × 1 =