ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿರುವುದರಿಂದ ಚುನಾವಣೆಯು ಶಾಂತ ಮತ್ತು ಮುಕ್ತವಾಗಿ ನಡೆಯುವಂತಾಗಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ, ಡಿಸೆಂಬರ್ 22 ರಂದು ಉಡುಪಿ, ಹೆಬ್ರಿ, ಬ್ರಹ್ಮಾವರ ಹಾಗೂ ಬೈಂದೂರು ತಾಲೂಕಿನಲ್ಲಿ ಮೊದಲನೇ ಹಂತದ ಚುನಾವಣೆ ನಡೆಯಲಿದ್ದು, ಡಿಸೆಂಬರ್ 20 ರ ಸಂಜೆ 5 ಗಂಟೆಯಿಂದ ಡಿಸೆಂಬರ್ 22 ರ ಸಂಜೆ 5 ಗಂಟೆಯವರೆಗೆ ಹಾಗೂ ಡಿಸೆಂಬರ್ 27 ರಂದು ಕುಂದಾಪುರ, ಕಾರ್ಕಳ ಹಾಗೂ ಕಾಪು ತಾಲೂಕಿನಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಡಿಸೆಂಬರ್ 25 ರ ಸಂಜೆ 5 ಗಂಟೆಯಿಂದ ಡಿಸೆಂಬರ್ 27 ರ ಸಂಜೆ 5 ರ ವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ
ಗ್ರಾ.ಪಂ ಸಾರ್ವತ್ರಿಕ ಚುನಾವಣೆ: ಮದ್ಯ ಮಾರಾಟ ನಿಷೇಧ
