ಗ೦ಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರ೦ಭೋತ್ಸವ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗ೦ಗೊಳ್ಳಿ: ವಿದ್ಯಾ ಸಂಸ್ಥೆಯಲ್ಲಿ ದೊರೆಯುವ ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವ ಛಾತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಉದ್ದೇಶಗಳನ್ನು ಈಡೇರಿಸುಕೊಳ್ಳುವಲ್ಲಿ ಛಲ ಮತ್ತು ಪರಿಶ್ರಮ ಇದ್ದಾಗ ಮಾತ್ರ ಯಶಸ್ಸು ನಮ್ಮದಾಗಲು ಸಾಧ್ಯ ಎಂದು ಜಿ.ಎಸ್. ವಿ. ಎಸ್ ಅಸೋಷಿ ಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಅಭಿಪ್ರಾಯಪಟ್ಟರು.

Call us

Call us

ಅವರು ಇಲ್ಲಿಯ ರೋಟರಿ ಸಭಾ೦ಗಣದಲ್ಲಿ ನಡೆದ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ತರಗತಿಗಳ ಆರ೦ಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿ ಸರಸ್ವತಿ ವಿದ್ಯಾಲಯ ಕಾಲೇಜಿನ ಕಾರ‍್ಯದರ್ಶಿ ಎನ್ ಸದಾಶಿವ ನಾಯಕ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕನ್ನಡ ಉಪನ್ಯಾಸಕ ಎಚ್ ಸುಜಯೀಂದ್ರ ಹಂದೆ ವಿದ್ಯಾಲಯ ಬಳಗವನ್ನು ಪರಿಚಯಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಶಿಸ್ತು ಪಾಲನೆ ನೀತಿ ನಿಯಮಗಳ ಬಗೆಗೆ ಮಾಹಿತಿ ನೀಡಿದರು.ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ದೊರೆಯುವ ವಿವಿಧ ಸೌಲಭ್ಯ ಗಳ ಬಗೆಗೆ ಹಿಂದಿ ಉಪನ್ಯಾಸಕ ನಾರಾಯಣ ನಾಯ್ಕ್ ಮತ್ತು ಕಛೇರಿ ಪ್ರಬಂಧಕ ಭಾಸ್ಕರ್ ಎಚ್ ಜಿ ವಿವರಿಸಿದರು.

Call us

Call us

ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಪ್ರಾಂಶುಪಾಲ ಆರ್ ಎನ್ ರೇವಣ್‌ಕರ್, ವಿದ್ಯಾರ್ಥಿ ಪ್ರತಿನಿಧಿಗಳಾದ ರೋಹನ್ ಮತ್ತು ಚೈತ್ರಾ ಶ್ಯಾನುಭಾಗ್ ಮೊದಲಾದವರು ಉಪಸ್ಥಿತರಿದ್ದರು. ಸಂಸ್ಕೃತ ಉಪನ್ಯಾಸಕ ಎನ್ ಸಿ ವೆಂಕಟೇಶ ಮೂರ್ತಿ ಪ್ರಾಸ್ತಾವಿಸಿದರು. ಸುಗುಣ ಆರ್ ಸ್ವಾಗತಿಸಿದರು ಶಾಲೆಟ್ ಲೋಬೋ ಕಾರ‍್ಯಕ್ರಮ ನಿರೂಪಿಸಿದರು. ಪ್ರವೀಣ್ ಕಾಮತ್ ವ೦ದಿಸಿದರು.

ವರದಿ : ನರೇ೦ದ್ರ ಎಸ್ ಗ೦ಗೊಳ್ಳಿ

Leave a Reply

Your email address will not be published. Required fields are marked *

3 × 3 =