ಜಗತ್ತಿಗೆ ಬೆಳಕಾಗುವ ಶಿಕ್ಷಣ ನಮ್ಮದಾಗಬೇಕು: ಹರೀಶ್ ಕುಮಾರ್ ಶೆಟ್ಟಿ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ೨೦೧೭-೧೮ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮವು ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ನಡೆಯಿತು.

Call us

Call us

ಮುಖ್ಯ ಅತಿಥಿಯ ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ, ಹಿಂದಿನವರಿಂದ ಬಂದ, ಎಲ್ಲರೂ ಒಂದಾಗಿ ಬಾಳೋಣ ಎಂಬ ಕಲ್ಪನೆಗಳು ಶಾಲೆಯಲ್ಲಿ ಮಾತ್ರ ಸಾಧ್ಯ. ಕಿವಿಯಿಂದ ಕೇಳಿದ ಪಾಠ ಮನಸ್ಸಿನೊಳಗೆ ಹೋಗದಿದ್ದರೆ ಏನೂ ಪ್ರಯೋಜನವಾಗದು. ಭಗವಂತ ಕೊಟ್ಟ ಸೂಕ್ಷ್ಮ ಅಂಗಾಗಗಳಲ್ಲಿ ಸಮರ್ಪಕ ವ್ಯವಸ್ಥೆಯಿದೆ. ಪ್ರತಿಯೊಂದನ್ನು ಶೃದ್ಧೆಯಿಂದ ಕಲಿತು ವಿಷಯಗಳನ್ನು ಸ್ವೀಕರಿಸಿ ಪುನಃ ಜಗತ್ತಿಗೆ ನೀಡುವಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು. ತನ್ನ ಅಧಿಕಾರದ ಅವಧಿಯಲ್ಲಿ ದೇವಳದ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ಅವಿರತ ಶ್ರಮಿಸುತ್ತೇನೆ ಎಂದರು.

ಕಾಲೇಜಿನ ಪ್ರಾಂಶುಪಾಲ ಅರುಣಪ್ರಕಾಶ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭ ಕಾಲೇಜಿನ ಹಳೆವಿದ್ಯಾರ್ಥಿಗಳಾದ ಜಯಂತ್ ಮತ್ತು ವೀರೇಂದ್ರ ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ನೂತನ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದರು.

Call us

Call us

ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ. ರಮೇಶ ಗಾಣಿಗ, ಗ್ರಾಪಂ ಅಧ್ಯಕ್ಷ ಮಾವಿನಕಾರು ಜಯಪ್ರಕಾಶ್ ಶೆಟ್ಟಿ ಹಾಗೂ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು. ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿಯರಾದ ಸಹನಾ ಸ್ವಾಗತಿಸಿ, ಶ್ರೀಲಕ್ಷ್ಮೀ ವಂದಿಸಿದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ ಪೂರ್ಣಿಮಾ ಮತ್ತು ಮಮತಾ ನಿರೂಪಿಸಿದರು.

Leave a Reply

Your email address will not be published. Required fields are marked *

seventeen − 10 =