ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಜಡ್ಕಲ್ ಇದರ ಜಂಟಿ ಆಶ್ರಯದಲ್ಲಿ ರೈತ ಸದಸ್ಯರಿಗೆ ಕೃಷಿ ಉದ್ದೇಶ ಸಾಲ -ಮೇಳ ಕಾರ್ಯಕ್ರಮವನ್ನು ಸಂಘದ ವ್ಯಾಪ್ತಿಯ ಜಡ್ಕಲ್ ಸೆಂಟ್ ಜೋರ್ಜ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ನಿರ್ದೇಶಕರಾದ ರಾಜು ಪೂಜಾರಿ ಅವರು ಕಾರ್ಯಕ್ರಮನ್ನು ಉದ್ಘಾಟಿಸಿದರು.
ಈ ಸಂದರ್ಭ ಜಡ್ಕಲ್ ವ್ಯ. ವ. ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಮಹೇಶ್ ಹೆಗ್ಡೆ, ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವನಜಾಕ್ಷಿ ಶೆಟ್ಟಿ, ಜಡ್ಕಲ್ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಸತ್ಯನಾರಾಯಣ ಅಡಿಗ, ದ. ಕ. ಜಿ.ಕೇಂದ್ರ ಸಹಕಾರಿ ಬ್ಯಾಂಕ್ ಸ. ಸಂಘಗಳ ವಲಯ ಮೇಲ್ವಿಚಾರಕರಾದ ಶಿವರಾಮ ಪೂಜಾರಿ ಉಪಸ್ಥಿತರಿದ್ದರು.
