ಜನರ ಸಹಕಾರದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ: ಮಂಜುನಾಥ ಶೆಟ್ಟಿ

Call us

Call us

ಕುಂದಾಪುರ: ಎಲ್ಲವನ್ನೂ ಕಾನೂನಿನಿಂದ ಸರಿಪಡಿಸಲು, ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ. ಜನರು ಇಲಾಖೆಗೆ ನೀಡುವ ಸಹಕಾರ ಹಾಗೂ ಜನರ ಸಹಭಾಗಿತ್ವದ ವ್ಯವಸ್ಥೆಯಿಂದ ಅಪರಾಧಗಳನ್ನು ನಿಯಂತ್ರಿಸಲು, ಸಮಾಜದಲ್ಲಿ ಸುಧಾರಣೆ ತರಲು ಸಾಧ್ಯವಿದೆ. ದೇಶದಲ್ಲಿ ಯುವ ಜನರ ಪ್ರೀತಿ ವಿಶ್ವಾಸ, ಬಾಂಧವ್ಯ ಹಾಗೂ ಸಾಮರಸ್ಯದ ಜೀವನ ನಡೆಸಿದಾಗ ದೇಶ ಪ್ರಗತಿಪಥದತ್ತ ಸಾಗಲು ಸಹಾಯಕವಾಗಲಿದೆ ಎಂದು ಕುಂದಾಪುರ ಡಿವೈಎಸ್‌ಪಿ ಮಂಜುನಾಥ ಶೆಟ್ಟಿ ಅಭಿಪ್ರಾಯಪಟ್ಟರು.

Call us

Call us

Visit Now

ಅವರು ಕಂಚುಗೋಡು ಭಗತ್‌ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೆಹರು ಯುವಕೇಂದ್ರ ಉಡುಪಿ, ಆದರ್ಶ ಯುವಕ ಮಂಡಲ ಭಗತ್ ನಗರ ಕಂಚುಗೋಡು, ಗಂಗೊಳ್ಳಿ ಪೊಲೀಸ್ ಠಾಣೆ ಹಾಗೂ ರೋಟರಿ ಕ್ಲಬ್ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಜರಗಿದ ವಿಷಯಾಧಾರಿತ ಶಿಕ್ಷಣ ಜಾಗೃತಿ ಅರಿವು ಮೂಡಿಸುವ ಕಾರ್ಯಕ್ರಮ ಮತ್ತು ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Click here

Call us

Call us

ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಹಾಗೂ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಸರಕಾರ ಹಾಗೂ ಪೊಲೀಸ್ ಇಲಾಖೆ ಹೆಚ್ಚಿನ ಒತ್ತು ನೀಡಿ ಕೆಲಸ ನಿರ್ವಹಿಸುತ್ತಿದೆ. ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಮಕ್ಕಳ ರಕ್ಷಣೆ, ಕಾಣೆಯಾದ ಮಕ್ಕಳ ಪತ್ತೆ ಹಚ್ಚಲು ಪೊಲೀಸ್ ಇಲಾಖೆ ಶ್ರಮ ವಹಿಸುತ್ತಿದೆ. ಹಳ್ಳಿಗಳಿಗೆ ತೆರಳಿ ಕಾನೂನಿನ ಬಗ್ಗೆ ಮಾಹಿತಿ ನೀಡಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಎಲ್ಲರೂ ಶ್ರಮಿಸಬೇಕು ಎಂದರು.

ಜಿಪಂ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕುಂದಾಪುರದ ವಕೀಲ ರಾಘವೇಂದ್ರಚರಣ್ ನಾವಡ ಮಾಹಿತಿ ನೀಡಿದರು. ಬೈಂದೂರು ಪೊಲೀಸ್ ವೃತ್ತನಿರೀಕ್ಷಕ ಸುದರ್ಶನ ಎಂ., ಗಂಗೊಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ವೆಂಕಟೇಶ ಗೊಲ್ಲ, ಗಂಗೊಳ್ಳಿ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ನಾಗ ಖಾರ್ವಿ, ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ ಖಾರ್ವಿ, ಆದರ್ಶ ಯುವಕ ಮಂಡಲದ ಅಧ್ಯಕ್ಷ ವಿನೋದ ಖಾರ್ವಿ ಉಪಸ್ಥಿತರಿದ್ದರು.  ಆದರ್ಶ ಯುವಕ ಮಂಡಲದ ಶ್ರೀಕಾಂತ ಖಾರ್ವಿ ಸ್ವಾಗತಿಸಿದರು. ನೆಹರು ಯುವ ಕೇಂದ್ರದ ಜಿಲ್ಲಾ ಸಲಹೆಗಾರ ನರಸಿಂಹ ಗಾಣಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

4 × two =