ಜಿಎಸ್‌ಬಿ ಸಮಾಜದ ಗೌರವವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ: ಕೆ. ಮೋಹನದಾಸ ಶೆಣೈ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದಲ್ಲಿ ಅನೇಕ ಮಂದಿ ಸಾಧಕರಿದ್ದು, ಬ್ಯಾಂಕಿಂಗ್, ಶೈಕ್ಷಣಿಕ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ನಮ್ಮ ಸಮಾಜದವರಿಗೆ ಉತ್ತಮ ಸ್ಥಾನಮಾನ ಗೌರವ ಇದೆ. ಈ ಗೌರವವನ್ನು ಕಾಪಾಡಿಕೊಂಡು ಹೋಗಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆದ್ದರಿಂದ ಹಿರಿಯರನ್ನು ಗೌರವಿಸುವುದು, ಹಿರಿಯರ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು ಎಂದು ಕುಂದಾಪುರ ಪುರಸಭೆಯ ಮಾಜಿ ಅಧ್ಯಕ್ಷ ಕೆ. ಮೋಹನದಾಸ ಶೆಣೈ ಹೇಳಿದರು.

ಅವರು ಗಂಗೊಳ್ಳಿಯ ವೇದಮೂರ್ತಿ ಕೃಷ್ಣಾನಂದ ವಿಶ್ವನಾಥ ಆಚಾರ್ಯ ಸ್ಮಾರಕ ದತ್ತಿನಿಧಿ ವತಿಯಿಂದ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ದಿ.ಕೃಷ್ಣಾನಂದ ವಿಶ್ವನಾಥ ಆಚಾರ್ಯ ಅವರು ಸಮಾಜಕ್ಕೆ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದುದು. ಅವರ ಮಾರ್ಗದರ್ಶನದಲ್ಲಿ ಸಮಾಜದಲ್ಲಿ ಅನೇಕ ಉತ್ತಮ ಕೆಲಸ ಕಾರ್ಯಗಳು ನಡೆದಿದ್ದು, ಅವರ ನೆನಪಿನಲ್ಲಿ ಸಮಾಜದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯ ಎಂದು ಅವರು ಹೇಳಿದರು.

ಇದೇ ಸಂದರ್ಭ ವೇದಮೂರ್ತಿ ಜಗದೀಶ ಭಟ್, ಕುಂದಾಪುರ ಪುರಸಭೆಯ ಮಾಜಿ ಅಧ್ಯಕ್ಷ ಕೆ.ಮೋಹನದಾಸ ಶೆಣೈ, ಗಂಗೊಳ್ಳಿಯ ಸೀತಾ ಬಾಯಿ ಮರ್ತಪ್ಪ ಶ್ಯಾನುಭಾಗ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಮೂರ್ತಿ ಜಿ.ನಾರಾಯಣ ವಿಶ್ವನಾಥ ಆಚಾರ್ಯ, ವೇದಮೂರ್ತಿ ಜಿ.ವೇದವ್ಯಾಸ ಕೆ.ಆಚಾರ್ಯ, ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಕಾರ್ಯದರ್ಶಿ ಜಿ.ವೆಂಕಟೇಶ ನಾಯಕ್, ಡಾ.ಕಾಶೀನಾಥ ಪೈ, ಜಿ.ಶಂಕರ ಆಚಾರ್ಯ ಹಾಗೂ ಆಚಾರ್ಯ ಕುಟುಂಬಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

one × four =