ಜಿಎಸ್‌ಬಿ ಸಮಾಜದ ನಾಯ್ಕನಕಟ್ಟೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳ ಪುನರ್‌ಪ್ರತಿಷ್ಠೆಗೆ ಸಜ್ಜು

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಕೆರ್ಗಾಲು ಗ್ರಾಪಂ ವ್ಯಾಪ್ತಿಯ ನಾಯ್ಕನಕಟ್ಟೆ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದವರ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವೆಂಕಟರಮಣ ಸೇವಾ ಸಮಿತಿ ಟ್ರಸ್ಟ್‌ನ ವಿಶೇಷ ಮಹಾಸಭೆಯು ಸಂಜೆ ಜರಗಿತು.

Click Here

Call us

Call us

Visit Now

ಸುಮಾರು 800 ನೂರು ವರ್ಷ ಇತಿಹಾಸವಿರುವ ಈ ದೇವಾಲಯವು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಾಗಿ ತೆರವುಗೊಳಿಸಿದ್ದು, ಈಗ ದೇವಸ್ಥಾನವನ್ನು ಅಂದಾಜು ವೆಚ್ಚ ರೂ. 35 ಲಕ್ಷ ವೆಚ್ಚದಲ್ಲಿ ಪುನರ್‌ನಿರ್ಮಾಣ ಮಾಡಲು ಈ ಹಿಂದೆ ಸಮಾಜ ಬಾಂಧವರು ತೀರ್ಮಾನಿಸಿದಂತೆ ಕಾಮಗಾರಿ ಮುಗಿಯುವ ಹಂತಕ್ಕೆ ತಲುಪಿದೆ. ನೂತನ ಶ್ರೀ ವೆಂಕಟರಮಣ ದೇವಾಲಯವನ್ನು ಜುಲೈ ಮೊದಲ ವಾರದ ಮೂರು ದಿನಗಳು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಪುನಃಪ್ರತಿಷ್ಟಾ ಮಹೋತ್ಸವ ಆಚರಿಸುವಂತೆ ನಿರ್ಧರಿಸಲಾಯಿತು.

Click here

Click Here

Call us

Call us

ಸೇವಾ ಸಮಿತಿಯ ಟ್ರಸ್ಟ್‌ನ ಅಧ್ಯಕ್ಷ ದಾಮೋದರ ಪ್ರಭು ಅಧ್ಯಕ್ಷತೆ ವಹಿಸಿ ಮಾತನಾಡಿ, ಉತ್ಸವದ ಕಾಲದಲ್ಲಿ ದೇವಸ್ಥಾನದಲ್ಲಿ ಜರಗುವ ಎಲ್ಲಾ ಧಾರ್ಮಿಕ ಹಾಗೂ ಇತರ ಕಾರ್ಯಕ್ರಮಗಳಿಗೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭ 13 ಉಪಸಮಿತಿಯನ್ನು ರಚಿಸಲಾಯಿತು. ಕೆ. ರವೀಂದ್ರ ಕಿಣಿ ಉತ್ಸವದ ಮೂರು ದಿನಗಳ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತನಾಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋವಿಂದ್ರಾಯ ಪೈ, ಕಾರ್ಯದರ್ಶಿ ಸತೀಶ್ ಪೈ, ಸೇವಾ ಸಮಿತಿಯ ಎಲ್ಲಾ ಸದಸ್ಯರು ಶ್ರೀವರಮಹಾಲಕ್ಷ್ಮೀ ಸೇವಾ ಸಮಿತಿ ಸದಸ್ಯೆಯರು ಹಾಗೂ ಸಮಾಜದ ಹತ್ತು ಸಮಸ್ತರು ಉಪಸ್ಥಿತರಿದ್ದರು. ಸೇವಾ ಸಮಿತಿಯ ಕಾರ್ಯದರ್ಶಿ ರಮೇಶ ಪೈ ಸ್ವಾಗತಿಸಿದರು. ನಂತರ ಯು. ಶ್ರೀನಿವಾಸ ಪ್ರಭು ಹಾಗೂ ಬಿ. ಗಣೇಶ ಕಾರಂತ್ ಮಾರ್ಗದರ್ಶನದಲ್ಲಿ ಸಮಾಜದ ಮಕ್ಕಳ ರಂಗ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಯಿತು.

Leave a Reply

Your email address will not be published. Required fields are marked *

2 × 1 =