ಜಿಲ್ಲಾ ಮಟ್ಟದ ಕೆಡಿಪಿ ಸಮಿತಿ ಸದಸ್ಯರಾಗಿ ರಾಜು ಪೂಜಾರಿ ನೇಮಕ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕರ್ನಾಟಕ ಸರಕಾರದ ಜಿಲ್ಲಾ ಮಟ್ಟದ ಕೆಡಿಪಿ ಸಮಿತಿ ಕಾರ್ಯಾಚರಿಸುತ್ತಿದ್ದು ಪ್ರಸಕ್ತ ಸಾಲಿನಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ ಅವರನ್ನು ಉಡುಪಿ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

Call us

Call us

ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಿಲ್ಲೆಯಲ್ಲಿ ಸರಕಾರದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಅನುಭವ ಹೊಂದಿರುವ ರಾಜು ಪೂಜಾರಿ ಅವರನ್ನು ಕೆಡಿಪಿ ಸಮಿತಿಯ ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರವು ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

12 + fifteen =