ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇವರ ಆಶ್ರಯದಲ್ಲಿ ಮಾರ್ಚ್ 21ರಂದು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ ಮೊದಲ ಯುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನಾಧ್ಯಕ್ಷರಾಗಿ ಶಿಕ್ಷಕ, ಹೆಬ್ರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ. ವಿ ಆನಂದ ಸಾಲಿಗ್ರಾಮ ಅವರನ್ನು ಆಯ್ಕೆ ಮಾಡಲಾಗಿದೆ.
ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.