ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಲ್ಲಿ ಸೆ. ೧೧ ಹಾಗೂ ೧೨ ರಂದು ರೆಡ್ ಅಲರ್ಟ್ ಮತ್ತು ಸೆ. ೧೩ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದರಿಂದ ಹೆಚ್ಚು ಮಳೆಯಾಗುವ ಸಾಧ್ಯತೆ ಇರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗೃತಾ ಕ್ರಮವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡಿದ್ದು, ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು/ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು.

ಸಾರ್ವಜನಿಕರು ನದಿ/ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ/ಕಟ್ಟಡ/ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳನ್ನು ತಲುಪಬೇಕು.

ತುರ್ತು ಸೇವೆಗೆ 1077, ದೂರವಾಣಿ ಸಂಖ್ಯೆ: 0824-2574802 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿ ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

three × 3 =