ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮೇಲ್ದರ್ಜೆಗೆ ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ಮತ್ತು ಹಣ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ , ಜಿಲ್ಲೆಯ ಕೋವಿಡ್-19 ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತೆಗಳು ಮೇಲ್ದರ್ಜೆಗೆ ಏರಿಸಲು ಅಗತ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡುವಂತೆ ತಿಳಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್, ಕುಂದಾಪುರದ ಡಾ. ಜಿ. ಶಂಕರ್ ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆ ಮಾಡಲು ನಿರ್ಧರಿಸಲಾಗಿದ್ದು, ಈಗಾಗಲೇ ಎಸ್.ಬಿ.ಐ ನಿಂದ 4 ಮತ್ತು ಇನ್ಪೋಸಿಸ್ ನಿಂದ 3 ವೆಂಟಿಲೇಟರ್ ಗಳ ಸರಬರಾಜು ಆಗಿದ್ದು, ಅವುಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ,ಅಲ್ಲದೇ ಕನಿಷ್ಠ 40 ಬೆಡ್ ಗಳ ಆಕ್ಸ್ಸಿಜಿನ್ ಸಂಪರ್ಕ ವ್ಯವಸ್ಥೆ ಕಲ್ಪಿಸುವುದರ ಮೂಲಕ ಇದನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆ ಮಾಡಲು ನಿರ್ಧರಿಸಲಾಗಿದೆ ಎಂದರು.

ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂ ಗಳಲ್ಲಿ ಫೀವರ್ ಕ್ಲಿನಿಕ್ ಗಳನ್ನು ಅಳವಡಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜ್ವರ ತಪಾಸಣೆಗಾಗಿ ಎಲ್ಲಾ ರೋಗಿಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಕಳುಹಿಸದಂತೆ ಸೂಚಿಸಿದರು, ಅಲ್ಲದೇ ತಮ್ಮಲ್ಲಿ ದಾಖಲಾಗುವ ಎಲ್ಲಾ ಐ.ಲ್.ಐ ಮತ್ತು ಸಾರಿ ಪ್ರಕರಣಗಳ ಕುರಿತು ಪ್ರತಿದಿನ ಜಿಲ್ಲಾಡಳಿತ ಮಾಹಿತಿ ನೀಡುವಂತೆ ತಿಳಿಸಿದ್ದರೂ ಸಹ ಕೆಲವು ಆಸ್ಪತ್ರೆಗಳಿಂದ ಮಾಹಿತಿ ನೀಡುತ್ತಿಲ್ಲ ಅಂತಹವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದರು.

ಜಿಲ್ಲೆಯಲ್ಲಿ ಹೋ ಕ್ವಾರಂಟೈನ್ ನಲ್ಲಿರುವವರ ಮನೆಗೆ ಪ್ರತಿದಿನ ಭೇಟಿ ಆರೋಗ್ಯ ಇಲಾಖೆ ಸಿಬ್ಬಂದಿ ತೆರಳಿ ಪರಿಶೀಲಿಸುತ್ತಿದ್ದು, ಯಾವುದೇ ಕೋವಿಡ್ 19 ಲಕ್ಷಣಗಳು ಕಂಡುಬAದಲ್ಲಿ ಕೂಡಲೇ ಕೋವಿಡ್ ಆಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ, ಜಿಲ್ಲೆಯಲ್ಲಿ ಕೋವಿಡ್-19 ನಿಂದ ಯಾವುದೇ ರೋಗಿಯ ಸಾವು ಸಂಭವಿಸದoತೆ ಅತ್ಯಂತ ಎಚ್ಚರ ವಹಿಸಲಾಗಿದೆ, ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ 19 ನಿಂದ ಗುಣಮುಖರಾಗುವ ಪ್ರಮಾಣ ಅತ್ಯಂತ ಹೆಚ್ಚಿನದಾಗಿದ್ದು, ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್-19 ನಿಂದ ಯಾವುದೇ ಸಾವು ಸಂಭವಿಸಿಲ್ಲ, ಕೋವಿಡ್ 19 ಸೋಂಕು ಇರುವ ಒಬ್ಬರು ವ್ಯ್ಯಕ್ತಿ ಮಾತ ಮೃತಪಟ್ಟಿದ್ದು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಕೋವಿಡ್ ನಿಂದ ಅಲ್ಲ ಎಂದು ಡಿಸಿ ಜಿ.ಜಗದೀಶ್ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್-19 ರೋಗಿಗಳು ಅತ್ಯಂತ ಶೀಘ್ರದಲ್ಲಿ ಗುಣಮುಖರಾಗುತ್ತಿದ್ದು, 1000 ಕ್ಕಿಂತ ಹೆಚ್ಚು ಕೋವಿಡ್-19 ಪ್ರಕರಣಗಳು ಪತ್ತೆಯಾದರೂ ಸಹ ಯಾವುದೇ ಸಾವು ಸಂಭವಿಸದoತೆ ಹಗಲಿರುಳು ಶ್ರಮಿಸುತ್ತಿರುವ ಎಲ್ಲಾ ವೈದ್ಯಕೀಯ ಸಿಬ್ಬಂದಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಮುಂದಿನ ಎರಡು ತಿಂಗಳು ಜಿಲ್ಲಾಡಳಿತಕ್ಕೆ ಸವಾಲಿನದಾಗಿದ್ದು, ಜಿಲ್ಲೆಗೆ ಹೊರರಾಜ್ಯದಿಂದ ಇನ್ನೂ ಅನೇಕ ಮಂದಿ ಆಗಮಿಸುತ್ತಿದ್ದು, ಅದರಲ್ಲಿ ಪ್ರಸ್ತುತ ಕೋವಿಡ್-19 ರೋಗ ಲಕ್ಷಣಗಳಿರುವ ಮತ್ತು ವಿಶೇಷ ವರ್ಗದವರನ್ನು ಮಾತ್ರ ಪರೀಕ್ಷಿಸುತ್ತಿದ್ದು, ಉಳಿದವರನ್ನು ಪರೀಕ್ಷೆ ಮಾಡುತ್ತಿಲ್ಲ ಆದ್ದರಿಂದ ಜಿಲ್ಲೆಯಲ್ಲಿ ಸರ್ವೆಲೆನ್ಸ್ ನ್ನು ತೀವ್ರಗೊಳಿಸುವಂತೆ ಎಲ್ಲಾ ವೈದ್ಯಾಧಿಕಾರಿಗಳಿಗೆ ಸೂಚಿಸಿರುವ ಜಿಲ್ಲಾಧಿಕಾರಿಗಳು, ಯಾವುದೇ ಪ್ರಾಣ ಹಾನಿಯಾದಗಂತೆ ಎಚ್ಚರವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್,ಡಿಹೆಚ್ಓ ಡಾ. ಸುಧೀರ್ ಚಂದ್ರ ಸೂಡಾ,ಜಿಲ್ಲಾ ಕೋವಿಡ್-19 ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

nineteen + sixteen =