ಜೂ.28ರಿಂದ ಮಂಗಳೂರು-ಪೂನಾ, ಉಡುಪಿ-ಹೈದ್ರಾಬಾದ್ ಮಾರ್ಗದ ಸಾರಿಗೆ ಕಾರ್ಯಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸ್ತುತ ಕೋವಿಡ್-19 ಲಾಕ್ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸ.ನಿಗಮದ ವತಿಯಿಂದ ಮಂಗಳೂರು-ಪೂನಾ ಮಾರ್ಗದಲ್ಲಿ ಅಂಬಾರಿ ಡ್ರೀಮ್ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 28 ರಿಂದ ಪುನಃ ಸಂಚಾರವನ್ನು ಪ್ರಾರಂಭಿಸಲಾಗುವುದು.

ಸಾರಿಗೆ ಕಾರ್ಯಾಚರಣೆಯ ವಿವರ: ಅಂಬಾರಿ ಡ್ರೀಮ್ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯು ಮಧ್ಯಾಹ್ನ 4 ಗಂಟೆಗೆ ಮಂಗಳೂರಿನಿಂದ ಹೊರಟು ಉಡುಪಿ, ಮಣಿಪಾಲ, ಕುಂದಾಪುರ, ಕುಮಟ, ಬೆಳಗಾವಿ, ಕರಾಡ, ಸತಾರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಪೂನಾ ತಲುಪಲಿದೆ. ಮರು ಪ್ರಯಾಣದಲ್ಲಿ ಸಂಜೆ 6.30 ಕ್ಕೆ ಪೂನಾದಿಂದ ಹೊರಟು ಮರುದಿನ ಬೆಳಗ್ಗೆ 7 ಗಂಟೆಗೆ ಮಂಗಳೂರು ತಲುಪಲಿದೆ.

ಉಡುಪಿಯಿಂದ ಹೈದ್ರಾಬಾದ್ಗೆ ಈಗಾಗಲೇ ರಾಜಹಂಸ ಸಾರಿಗೆಗಳನ್ನು ಪ್ರಾರಂಭಿಸಲಾಗಿದ್ದು, ಉಡುಪಿಯಿಂದ ಬೆಳಗ್ಗೆ 11.30 ಕ್ಕೆ ಹೊರಟು ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹೊಸಪೇಟೆ, ರಾಯಚೂರು, ಮೆಹಬೂಬನಗರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಹೈದ್ರಾಬಾದ್ ತಲುಪಲಿದ್ದು, ಮರು ಪ್ರಯಾಣದಲ್ಲಿ ಸಂಜೆ 5.45 ಕ್ಕೆ ಹೈದ್ರಾಬಾದ್ನಿಂದ ಹೊರಟು ಮರುದಿನ ಬೆಳಗ್ಗೆ 11 ಗಂಟೆಗೆ ಉಡುಪಿ ತಲುಪಲಿದೆ.

ಈ ಸಾರಿಗೆಗಳಲ್ಲಿ ಆನ್ಲೈನ್ ಮುಂಗಡಟಿಕೇಟು ಬುಕ್ಕಿಂಗ್ ಸೌಲಭ್ಯಕ್ಕೆ https://ksrtc.in/ ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:
► ಜೂ.25ರಿಂದ ಮಂಗಳೂರು-ಹೈದ್ರಾಬಾದ್, ಮಂಗಳೂರು-ಮಂತ್ರಾಲಯ ಮಾರ್ಗದ ಸಾರಿಗೆ ಕಾರ್ಯಾಚರಣೆ – https://kundapraa.com/?p=49475.

Leave a Reply

Your email address will not be published. Required fields are marked *

9 + eleven =