ಜೆಸಿಐ ಸಪ್ತಾಹದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ
ಶಿರೂರು: ಜೆಸಿಐ ಶಿರೂರು ಇದರ ಸಾತ್ ಸುರ್ ಪರಿಸರ ಸ್ನೇಹಿ ಜೆಸಿಐ ಸಪ್ತಾಹದ ಕಾರ್ಯಕ್ರಮದ ಅಂಗವಾಗಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ಹಾಗೂ ಸಮಯದ ನಿರ್ವಹಣೆ ಎಂಬ ವಿಷಯದ ಕುರಿತು ಜೆಸಿಐ ವಲಯ ಹದಿನೈದರ ಉಪಾಧ್ಯಕ್ಷ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರಾಘವೇಂದ್ರ ಪ್ರಭು ಕರ್ವಾಲೋ ಉಪನ್ಯಾಸ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಚೆ ಬರೆದ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ನೀಡಿ ಪ್ರೋತ್ಸಾಹ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಶಿರೂರು ಇದರ ಅಧ್ಯಕ್ಷ ಪಾಂಡುರಂಗ ಅಳ್ವೆಗದ್ದೆ ವಹಿಸಿಕೊಂಡರು. ಮುಖ್ಯ ಅಥಿತಿಗಳಾಗಿ ಶ್ವೇತಾ ಪಾಂಡುರಂಗ ಉಪಸ್ಥಿತರಿದ್ದರು. ಶಾಲೆಯ ಪ್ರಭಾರ ಪ್ರಾಂಶುಪಾಲ ರಮೇಶ ನಾಯ್ಕ ಸ್ವಾಗತಿಸಿದರು. ಕೃಷ್ಣ ಎನ್. ಪೂಜಾರಿ ವಂದಿಸಿದರು.

Leave a Reply

Your email address will not be published. Required fields are marked *

nine + 18 =