ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜೇಸಿಐ ಕುಂದಾಪುರ ಸಿಟಿಯವರು ನೀಡಿದ ನಾಲ್ಕು ಬ್ಯಾರಿಕೇಡ್‌ಗಳನ್ನು ಜೇಸಿಐ ಅಧ್ಯಕ್ಷ ನಾಗೇಶ್ ನಾವಡ ಅವರು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಹಾಗೂ ಕುಂದಾಪುರ ಆರಕ್ಷಕ ಠಾಣೆಯ ಎಎಸ್‌ಐ ತಾರನಾಥ ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜೇಸಿಐ ಕುಂದಾಪುರ ಸಿಟಿಯ ಸ್ಥಾಪಕಾಧ್ಯಕ್ಷ ಹುಸೈನ್ ಹೈಕಾಡಿ, ಪೂರ್ವಾಧ್ಯಕ್ಷ ರಾಘವೇಂದ್ರ ಚರಣ್ ನಾವಡ, ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಸಾರ್ವಜನಿಕ ಸಂಪರ್ಕಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶಿವರಾಜ್ ಸಿ. ನಾವುಂದ ಹಾಗೂ ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಾಣಿಜ್ಯ ಉಪನ್ಯಾಸಕಿ ಪ್ರಥ್ವಿಶ್ರೀ ಜಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.