ಕುಂದಾಪ್ರ ಡಾಟ್ ಕಾಂ ಸುದ್ದಿ,
ಉಡುಪಿ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಜೈನ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿರುವ ಜೈನ ದೇವಾಲಯ (ಬಸದಿ) ನವೀಕರಣ, ದುರಸ್ಥಿ ಹಾಗೂ ಜೀರ್ಣೋದ್ಧಾರಕ್ಕಾಗಿ ಸಹಾಯಧನ ಪಡೆಯಲು ಜೈನ ಬಸದಿ ಸಮಿತಿ ಅಥವಾ ಮಂಡಳಿಯವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್ಸೈಟ್ https://dom.karnataka.gov.in/ ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ದೂರವಾಣಿ ಸಂಖ್ಯೆ: 0820-2573596 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.