ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಹಾಗೂ ಬಾಲಕಿಯರ ಪ್ರತ್ಯೇಕ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಸರಸ್ವತಿ ವಿದ್ಯಾಲಯದ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿದೆ.
ಬಾಲಕರ ತಂಡದಲ್ಲಿ ಮೊಗವೀರ ನಾಗೇಂದ್ರ, ಕಾರ್ತಿಕ್ ಬಿ, ನಾಗರಾಜ ನಾಯಕ್ ಪ್ರತೀಕ್ ಪ್ರಮೋದ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ತಂಡದಲ್ಲಿ ಮನಿಷಾ ಪೂಜಾರಿ,ರಕ್ಷಿತಾ ಕೊತ್ವಾಲ್, ಪ್ರತಿಭಾ ದೇವಾಡಿಗ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಮತ್ತು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಚಿತ್ರದಲ್ಲಿದ್ದಾರೆ.
ವರದಿ : ನರೇಂದ್ರ ಎಸ್ ಗಂಗೊಳ್ಳಿ.