ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಕೈಗಾರಿಕಾ ಭೇಟಿಯ ಭಾಗವಾಗಿ ಕೋಟೇಶ್ವರದ ಸನ್‌ರೈಸ್ ಪೈಪ್ ಇಂಡಸ್ಟ್ರಿ ಮತ್ತು ರಾಜಾರಾಮ್ ಪೊಲಿಮರ‍್ಸ್ ಇಂಡಸ್ಟ್ರಿ ಕೋಟೇಶ್ವರ ಇಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸನ್‌ರೈಸ್ ಕೈಗಾರಿಕೆಯ ವ್ಯವಸ್ಥಾಪಕರಾದ ಕುಮಾರ್ ಹಾಗೂ ರಾಜರಾಮ್ ಪೊಲಿಮರ‍್ಸ್ ಇಂಡಸ್ಟ್ರಿಯ ಪಾಲುದಾರರಾದ ವಿಘ್ನೇಶ್ ಕಾಮತ್‌ರವರು ಉತ್ಪನ್ನಗಳ ತಯಾರಿಕೆ ಮತ್ತು ಪ್ರಾತ್ಯಕ್ಷಿಕೆಯ ಕುರಿತು ಉಪನ್ಯಾಸ ನೀಡಿದರು. ಜೊತೆಗೆ ಯಂತ್ರಗಳ ಕಾರ್ಯವೈಖರಿಯನ್ನು ವಿವರಿಸಿದರು.

ವಿದ್ಯಾರ್ಥಿಗಳಿಗೆ ಅವಕಾಶ ಮತ್ತು ಮಾರ್ಗದರ್ಶನ ನೀಡಿದ ಆಡಳಿತ ಮಂಡಳಿಗೆ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ವೇತಾ ಯು. ಶೆಟ್ಟಿಯವರು ವಂದಿಸಿದರು. ಕಾಲೇಜಿನ ವತಿಯಿಂದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಚೈತ್ರಾ ಹಾಗೂ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಿರುಷಾ ಶೆಟ್ಟಿಯವರು ಸ್ಮರಣಿಕೆ ನೀಡಿ ಗೌರವಿಸಿದರು.

Leave a Reply

Your email address will not be published. Required fields are marked *

16 − 3 =