ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿ ಡಾ. ಜಯಕರ್ ಶೆಟ್ಟಿ ಆಯ್ಕೆ

Call us

Call us

ಕುಂದಾಪುರ: ದೆಹಲಿಯಲ್ಲಿ ನಡೆದ ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ನ್ಯೂಡೆಲ್ಲಿ ಚುನಾವಣೆಯಲ್ಲಿ ಡಾ. ಜಯಕರ್ ಶೆಟ್ಟಿ ಎಮ್. ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Call us

Call us

Call us

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್ ಮತ್ತು ಸಿಂಡಿಕೇಟ್ ಸದಸ್ಯರಾಗಿ ಸೇವೆಸಲ್ಲಿಸಿದ ಇವರು ಪ್ರಸ್ತುತ ಬೋರ್ಡ್ ಆಫ್ ಸ್ಟಡೀಸ್ ಛೇರ್‌ಮ್ಯಾನ್ ಆಗಿ ಸೇವೆಸಲ್ಲಿಸುತ್ತಿದ್ದಾರೆ.ಇವರು ಉಡುಪಿ ಜಿಲ್ಲೆ ಕುಂದಾಪುರ ತಾಲೂಕ್ ಗ್ರಾಮೀಣ ಪ್ರದೇಶದವರು. ಪ್ರೋಸ್ಟೋಡೊಂಟಿಕ್ಸನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಸರಕಾರಿ ಡೆಂಟಲ್ ಕಾಲೇಜ್ ಮತ್ತು ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ಪಡೆದಿರುವ ಇವರು ಎಇಸಿಎಸ್ ಬೆಂಗಳೂರಿನ ಮಾರುತಿ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಮತ್ತು ರಿಸರ್ಚ್ ಸೆಂಟರ್‌ನಲ್ಲಿ ಪ್ರಾಧ್ಯಾಪಕ ಮತ್ತು ಉಪಪ್ರಾಂಶುಪಾಲರಾಗಿ ಸೇವೆಸಲ್ಲಿಸುತ್ತಿದ್ದಾರೆ. ಇವರು ತೆಕ್ಕಟ್ಟೆ ವಿಶ್ವವಿನಾಯಕ ಸಿಬಿಎಸ್‌ಇ ಸ್ಕೂಲ್ ಟ್ರಸ್ಟಿಯಾಗಿರುತ್ತಾರೆ.

Leave a Reply

Your email address will not be published. Required fields are marked *

fourteen + 14 =