ತಂತ್ರಜ್ಞಾನದ ಬಳಕೆಯ ಜೊತೆಗೆ ಸುರಕ್ಷತೆಗೂ ಒತ್ತು ನೀಡಿ: ಜಿಲ್ಲಾಧಿಕಾರಿ ಜಿ. ಜಗದೀಶ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ದೈನಂದಿನ ಕಾರ್ಯಗಳಲ್ಲಿ ತಂತ್ರಜ್ಞಾನದ ಬಳಕೆಯ ಜೊತೆಗೆ ಅವುಗಳ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡುವುದು ಅವಶ್ಯವೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

Click Here

Call us

Call us

ಅವರು ನಗರದ ಮಣಿಪಾಲ್ನ ಜಿಲ್ಲಾ ಪಂಚಾಯತ್ನ ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಆಡಳಿತ ತರಬೇತಿ ಸಂಸ್ಥೆ, ಇ-ಆಡಳಿತ ಕೇಂದ್ರ ಬೆಂಗಳೂರು, ಇ- ಆಡಳಿತ ದತ್ತಾಂಶ ಕೇಂದ್ರ ಮೈಸೂರು ಇವರ ಸಹಯೋಗದೊಂದಿಗೆ ಸಾಮರ್ಥ್ಯ ಸಂಘಟನೆ ಯೋಜನೆಯ ಅಡಿಯಲ್ಲಿ ಸೈಬರ್ ಸೆಕ್ಯೂರಿಟಿ ಮತ್ತು ಇ- ಆಡಳಿತ ವಿಷಯಗಳ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

Click here

Click Here

Call us

Visit Now

ಮಾಹಿತಿ ತಂತ್ರಜ್ಞಾನದ ಬಳಕೆ ದೈನಂದಿನ ಜೀವನದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಕೆಲವರು ಇದರ ದುರುಪಯೋಗ ಪಡಿಸಿಕೊಂಡು ದೇಶದ ಯಾವುದೋ ಮೂಲೆಯಲ್ಲಿ ಕುಳಿತು ಅಮಾಯಕರ ಬ್ಯಾಂಕ್ ಖಾತೆಗಳಿಗೆ ಖನ್ನಾ, ಇ-ಮೇಲ್ ಐ.ಡಿ.ಗಳ ಹ್ಯಾಕ್, ಜಾಲತಾಣಗಳ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇವುಗಳಿಗೆ ಕಡಿವಾಣ ಹಾಕಲು ಸೈಬರ್ ಸೆಕ್ಯೂರಿಟಿಗಳ ಮಾಹಿತಿ ಹೊಂದಿ ಸುರಕ್ಷತೆಗೆ ಆದ್ಯತೆ ನೀಡುವುದು ಒಳಿತು ಎಂದರು.

ಯಾವುದೇ ಓರ್ವ ಅಪರಿಚಿತ ವ್ಯಕ್ತಿಯ ಹೆಸರಿನಿಂದ ಮೇಲ್ ಅಥವಾ ಸಂದೇಶಗಳು ಬಂದರೆ ಅವುಗಳ ಬಗ್ಗೆ ಎಚ್ಚೆತ್ತುಕೊಳ್ಳಬೇಕು, ತಪ್ಪಿದ್ದಲ್ಲಿ ಅವುಗಳ ತೆರೆಯುವಿಕೆಯಿಂದ ವೈರಸ್ ಹರಡಿ ದತ್ತಾಂಶಗಳು ಹಾಳಾಗುವ ಸಾಧ್ಯತೆ ಇರುತ್ತದೆ ಎಂದರು.

ಎಚ್ಚೆತ್ತಿರುವ ಸೈಬರ್ ಅಪರಾಧಿಗಳ ತಡೆಗೆ ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಸೈಬರ್ ಅಪರಾಧಿ ತಡೆ ತಾಣಗಳನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ತಾಲೂಕುಗಳಿಗೂ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದರು. ಕಚೇರಿಯಲ್ಲಿ ಬಳಸುವ ಗಣಕಯಂತ್ರಗಳಿಗೆ ವೈರಸ್ ನಿರೋಧಕ ತಂತ್ರಾಂಶಗಳನ್ನು ತಪ್ಪದೇ ಅಳವಡಿಸಬೇಕು. ಈ ಬಗ್ಗೆ ನಿರ್ಲಕ್ಷ ತಾಳಬಾರದು ಎಂದರು.

Call us

ಎನ್.ಐ.ಟಿ.ಕೆ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಲ್ವಿನ್ ರೋಶನ್ ಪೈಸ್ ಮಾತನಾಡಿ, ಆನ್‌ಲೈನ್‌ನಲ್ಲಿ ವ್ಯವಹಾರ ಹೆಚ್ಚಿದಂತೆ ಸುರಕ್ಷತೆ ಮತ್ತು ಜಾಗೃತಿ ಇಲ್ಲದೇ ಹಣ ಕಳೆದುಕೊಳ್ಳುತ್ತಿರುವವರು ಹೆಚ್ಚುತ್ತಿದ್ದಾರೆ. ಯಾವುದೋ ಉದ್ದೇಶಕ್ಕೆ ಇಟ್ಟುಕೊಂಡ ಹಣ ಕಳೆದುಕೊಂಡು ಅಮಾಯಕರಾಗಿ ಜನರು ಕಂಗಾಲಾಗುತ್ತಿದ್ದಾರೆ. ಕಳೆದುಕೊಂಡ ಹಣ ಮರಳಿ ಸಿಗುವುದು ತೀರ ವಿರಳ ಎಂದರು.

ವೆಬ್‌ಸೈಟ್‌ಗಳನ್ನು ರೂಪಿಸುವ ಸುರಕ್ಷತಾ ಕ್ರಮಗಳಿಗೂ ಹೆಚ್ಚಿನ ಗಮನ ಹರಿಸಬೇಕು. ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಂಗಳಲ್ಲಿ ಪಾಸ್‌ವರ್ಡ್  ನಿರಂತರವಾಗಿ ಬದಲಾಯಿಸುತ್ತಿರುವುದು ಅತೀ ಅಗತ್ಯ ಎಂದರು.

ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಮಂಗಳೂರು ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ವೆಂಕಟೇಶ್ ಜಿ., ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

seventeen + 4 =