ತಾಲೂಕು ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ

Call us

Call us

ಗಂಗೊಳ್ಳಿ: ಕ್ರೀಡೆ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ. ಕ್ರೀಡೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಯುವಕರನ್ನು ಸಂಘಟಿಸಲು ಕ್ರೀಡಾಕೂಟಗಳು ಸಹಕಾರಿಯಾಗುತ್ತದೆ. ಗಂಗೊಳ್ಳಿಯಂತಹ ಗ್ರಾಮೀಣ ಪ್ರದೇಶದಲ್ಲಿ ಅನೇಕ ಸಂಘಸಂಸ್ಥೆಗಳು ಕ್ರೀಡಾಕೂಟವನ್ನು ಸಂಘಟಿಸುವ ಮೂಲಕ ಕ್ರೀಡೆಗೆ ಹೆಚ್ಚು ಉತ್ತೇಜನ ನೀಡುತ್ತಿದೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ಹೇಳಿದರು.

Click here

Click Here

Call us

Call us

Visit Now

Call us

Call us

ಅವರು ಗಂಗೊಳ್ಳಿಯ ಜನತಾ ಐಸ್‌ಪ್ಲಾಂಟ್ ವಠಾರದಲ್ಲಿ ಚಾಲೆಂಜ್ ಕ್ರಿಕೆಟರ್‍ಸ್ ಬಂದರ್ ಗಂಗೊಳ್ಳಿ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ 30 ಗಜಗಳ ತಾಲೂಕು ಮಟ್ಟದ ಎರಡು ದಿನಗಳ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಪತ್ರಕರ್ತ ಬಿ.ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನಿರ್ದೇಶಕ ಮೋಹನ ಪಿ.ಖಾರ್ವಿ, ಜನತಾ ಐಸ್‌ಪ್ಲಾಂಟ್‌ನ ವ್ಯವಸ್ಥಾಪಕ ವಿಶ್ವನಾಥ ಕುಂದರ್ ಶುಭ ಹಾರೈಸಿದರು.

ಇದೇ ಸಂದರ್ಭ ರಾಷ್ಟ್ರಮಟ್ಟದ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಭಾಗವಹಿಸಿದ್ದ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಖಾರ್ವಿ ಅವರನ್ನು ಸನ್ಮಾನಿಸಲಾಯಿತು. ಗಂಗೊಳ್ಳಿ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಕಾರ್ಯದರ್ಶಿ ನಾಗರಾಜ ಖಾರ್ವಿ, ಚಾಲೆಂಜ್ ಕ್ರಿಕೆಟರ್‍ಸ್‌ನ ಅಧ್ಯಕ್ಷ ಚಂದ್ರ ಖಾರ್ವಿ ಉಪಸ್ಥಿತರಿದ್ದರು. ಸುಂದರ ಜಿ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

eighteen − 8 =